ಬೆಂಗಳೂರು: ಕೇರಳದಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಪ್ರವಾಹದಲ್ಲಿ 22 ಜನರು ಸಾವನ್ನಪ್ಪಿರುವ ಕುರಿತು ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು, ಕೇರಳಕ್ಕೆ 10 ಕೋಟಿ ರೂ. ಮೌಲ್ಯದ ಪರಿಹಾರ ಸಾಮಗ್ರಿ ರವಾನೆ ಮಾಡಲು ಆದೇಶಿಸಿದ್ದಾರೆ.
ಆಹಾರ ಸಾಮಾಗ್ರಿಗಳ ಜೊತೆಗೆ ವೈದ್ಯರ ತಂಡ ಕಳುಹಿಸಿ ಕೊಡುವಂತೆ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ನಿರ್ದೇಶನ ನೀಡಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ, ಪ್ರವಾಹ ಪರಿಸ್ಥಿತಿ ಎದುರಿಸಲು ಕೇರಳ ಸರ್ಕಾರಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು. ಈಗಾಗಲೇ ಕಬಿನಿಯ ಹಿನ್ನಿರಿನಿಂದ ಪ್ರವಾಹ ಸಮಸ್ಯೆ ಉಲ್ಬಣಗೊಳ್ಳುತ್ತಿರುವ ಕುರಿತು ಕೇರಳ ಸರ್ಕಾರ ಮಾಡಿರುವ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ, 75,000 ಕ್ಯೂಸೆಕ್ಸ್ ನೀರನ್ನು ಕಬಿನಿ ಜಲಾಶಯದಿಂದ ಬಿಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರವಾಹ ಪರಿಸ್ಥಿತಿ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದು, ಅದರಂತೆ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.
Click this button or press Ctrl+G to toggle between Kannada and English