ಹಾಸನ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಹಾಸನ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ವಿಚಾರ ತಿಳಿಸಿದರು. ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ನಾನೇ ನಾಲ್ಕೈದು ದಿನ ಹಾಸನದಲ್ಲಿದ್ದು ಕಾರ್ಯಕರ್ತರ ಸಭೆ ಮಾಡುತ್ತೇನೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಮೈತ್ರಿ ಇಲ್ಲ.
ಕಾಂಗ್ರೆಸ್ನೊಂದಿಗೆ ಮೈತ್ರಿಗೆ ಅಪಾಯವಾಗದಂತೆ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸುತ್ತೇವೆ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಾಗದ ರೀತಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತೇವೆ ಎಂದರು.
ಸರ್ಕಾರ ಅಸ್ಥಿರಗೊಳಿಸಲು ಮಾಜಿ ಸಿಎಂ ಯಡಿಯೂರಪ್ಪ ಹುನ್ನಾರ ನಡೆಸುತ್ತಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಯಾರಿಂದಲೂ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ.
ಲೋಕಸಭೆ ಚುನಾವಣೆ ಬಳಿಕವೂ ಸಮ್ಮಿಶ್ರ ಸರ್ಕಾರ ಬೀಳಲ್ಲ. ರಾಜ್ಯದ ಸಮ್ಮಿಶ್ರ ಸರ್ಕಾರ ಗಟ್ಟಿಯಾಗಿದೆ. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯವರು ಎಂಪಿ ಚುನಾವಣೆಗೂ ಮುನ್ನಾ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿಯವರಿಗೆ ಕುಮಾರಸ್ವಾಮಿಯೇ ಟಾರ್ಗೆಟ್ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಾನು ಪ್ರಧಾನಿ ಅಭ್ಯರ್ಥಿಯಾಗಲ್ಲಾ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಇದೇ ವೇಳೆ ಅವರು ಪುನರುಚ್ಛರಿಸಿದರು. ಮುಂದಿನ ದಿನಗಳಲ್ಲಿ ಹೆಚ್.ಡಿ.ಕುಮಾರಸ್ವಾಮಿ ರಾಷ್ಟ್ರ ರಾಜಕಾರಣಕ್ಕೆ ಹೋಗುವ ಸಾಧ್ಯತೆ ಇದೆ ಎಂದರು.
Click this button or press Ctrl+G to toggle between Kannada and English