[1]ಮಂಗಳೂರು: ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ಇಂದೂ ಕೂಡ ರಜೆ ಘೋಷಿಸಲಾಗಿದೆ.
ವರ್ಷಧಾರೆಗೆ ಕರಾವಳಿಯ ಜನ ನಲುಗಿ ಹೋಗಿದ್ದಾರೆ.ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಶಾಲಾ ಕಾಲೇಜಿಗೆ ಹೋಗಲು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.ಮಳೆಯ ತೀವ್ರತೆಯಿಂದ ಇಂದೂ ಕೂಡ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ನದಿಗಳು ತುಂಬಿ ಹಲವೆಡೆ ನೆರೆ ಕಾಣಿಸಿಕೊಂಡಿದೆ.