- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದೇಶದ ಜನರಿಗೆ ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್​ ಆರೋಗ್ಯ ಯೋಜನೆ: ನರೇಂದ್ರ ಮೋದಿ

narendra-modi [1]ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇಂದು ದೆಹಲಿಯ ಕೆಂಪುಕೋಟೆ ಮೇಲೆ ತಮ್ಮ ಕೊನೆ ಭಾಷಣ ಮಾಡಿದರು. ಈ ವೇಳೆ ದೇಶದ ಜನರಿಗೆ ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್ ಆರೋಗ್ಯ ಯೋಜನೆ ಗಿಫ್ಟ್ ನೀಡಿದ್ದಾರೆ.

ಈ ಹಿಂದೆ ಕೇಂದ್ರ ಬಜೆಟ್ ವೇಳೆ ಈ ಯೋಜನೆ ಪ್ರಸ್ತಾಪಗೊಂಡಿತ್ತು. ಇದೀಗ ಈ ಯೋಜನೆ ಬಗ್ಗೆ ಪ್ರಧಾನಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ದೇಶದ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಭಾಗ್ಯ ಸಿಗಲಿದೆ. ಈ ಮೂಲಕ ವಿಶ್ವದ ಅತಿದೊಡ್ಡ ಯೋಜನೆ ಎಂದು ಪರಿಗಣಿತವಾಗಿದೆ. ಈ ಯೋಜನೆಯಡಿ ಕುಟುಂಬವೊಂದಕ್ಕೆ 5 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ ಸದುಪಯೋಗ ಸಿಗಲಿದೆ. ಮೊದಲ ಹಂತವಾಗಿ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯೋಜನೆಯನ್ನು ಜಾರಿಗೆ ತರಲಾಗುತ್ತದೆ.

ಇನ್ನು ಮೊದಲ ಹಂತದಲ್ಲಿ ಈ ಯೋಜನೆ ಛತ್ತೀಸ್ಗಢ, ತ್ರಿಪುರ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಚಂಡೀಗಢ, ದಮನ್ ಮತ್ತು ದಿಯು, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಜಾರಿಯಾಗಲಿದೆ.

ಆಯುಷ್ಮಾನ್ ಭಾರತ್ ಯೋಜನೆ ಅಡಿ 50 ಕೋಟಿ ಜನರಿಗೆ ಪ್ರಯೋಜನ – 10 ಕೋಟಿ ಕುಟುಂಬಗಳಿಗೆ ಅನುಕೂಲ – ವಾರ್ಷಿಕವಾಗಿ 5 ಲಕ್ಷದವರೆಗೆ ಆಸ್ಪತ್ರೆ ಖರ್ಚು ರೂ. 1200 ಕೋಟಿ ಮೀಸಲು ಈಡಲಾಗಿದೆ. ಈ ಯೋಜನೆಯ ಆರೋಗ್ಯದ ಭಾಗವಾಗಿ ಆರೋಗ್ಯ ಕ್ಷೇಮ ಕೇಂದ್ರಗಳಿಗೆ ರೂ. 1200 ಕೋಟಿ ಮೀಸಲಿಡಲಾಗಿದೆ.

ಕ್ಷಯ ರೋಗಿಗಳ ಪೌಷ್ಟಿಕತೆಗಾಗಿ 600 ಕೋಟಿ ತೆಗೆದಿರಿಸಲಾಗಿದೆ. ಕೇಂದ್ರ ಬಜೆಟ್ 2018 ಪ್ರಮುಖ ಜನಪ್ರಿಯ ಯೋಜನೆಗಳ ವಿವರ. 30 ಸಾವಿರ ಕೋಟಿ ರೂ. ಅನುದಾನವನ್ನ ರಾಷ್ಟ್ರೀಯ ಆರೋಗ್ಯ ಯೋಜನೆ ಮೂಲಕ ನೀಡಲಾಗುತ್ತದೆ. ಇನ್ನು ಉತ್ತಮ ಆರೋಗ್ಯ ಸೌಲಭ್ಯಕ್ಕಾಗಿ ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆಗೆ 30 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಪ್ರಸಕ್ತ ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆ ಕೇವಲ ಬಡ ಭಾರತೀಯ ಕುಟುಂಬಗಳಿಗೆ 30,000 ರೂ. ಮಾತ್ರ ಒದಗಿಸುತ್ತಿದೆ.

ಆರಂಭದಲ್ಲೇ ಪಂಜಾಬ್, ಕೇರಳ, ಮಹಾರಾಷ್ಟ್ರ, ಕರ್ನಾಟಕ ಹಾಗೂ ನವದೆಹಲಿ ಈ ಯೋಜನೆಗೆ ಒಳಪಡುವುದಿಲ್ಲ. ತದನಂತರ ಈ ರಾಜ್ಯಗಳು ಈ ಯೋಜನೆಗೆ ಒಳಪಡಲಿವೆ ಎಂದು ಕೇಂದ್ರ ಸರ್ಕಾರ ಈಗಾಗಲೇ ತಿಳಿಸಿದೆ.