ನಾಡಿನೆಲ್ಲೆಡೆ ಭಕ್ತರಿಂದ ಸಂಭ್ರಮದ ನಾಗರಪಂಚಮಿ ಆಚರಣೆ..!

3:45 PM, Wednesday, August 15th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Nagarapanchami (17)ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗ ದೇವಸ್ಥಾನಗಳಲ್ಲಿ ನಾಗರಪಂಚಮಿಯನ್ನು ಬುಧವಾರ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಿದರು.

ಮಂಗಳೂರಿನ ಇತಿಹಾಸ ಪ್ರಸಿದ್ಧ ಕುಡುಪು ಅನಂತ ಪದ್ಮನಾಭ ದೇವಸ್ಥಾನದಲ್ಲಿ ಮುಂಜಾನೆಯೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ನಾಗ ದೇವರಿಗೆ ಹಾಲೆರೆದು ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಗರಪಂಚಮಿಯನ್ನು ಆಚರಿಸಿದರು.

ಕುಡುಪು ದೇವಸ್ಥಾನದಲ್ಲಿ  ಪ್ರಧಾನ ಆರ್ಚಕರ ಕೃಷ್ಣರಾಜ ತಂತ್ರಿಗಳ ನೇತೃತ್ವದಲ್ಲಿ ಹಾಲು, ಕ್ಷೀರಾ, ತುಪ್ಪ, ಜೇನಿನೊಂದಿಗೆ ಪಂಚಾಮೃತ ಆಭಿಷೇಕವನ್ನು ಮಾಡಿ ವಿಶೇಷ ಪೂಜೆ ನೆರವೇರಿಸಿದರು.

ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ ಮತ್ತು ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಇದೆ.ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಕುಟುಂಬವೂ ನಾಗನ ವಿಗ್ರಹಗಳಿಗೆ ಹಾಲು ಹಾಗೂ ಸೀಯಾಳಾಭಿಷೇಕವನ್ನು ಮಾಡುವ ಮೂಲಕ ನಾಗನ ಮೇಲಿರುವ ನಂಬಿಕೆ ಹಾಗೂ ಭಕ್ತಿಯನ್ನು ಸಾದರಪಡಿಸುತ್ತಾರೆ .

ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಜಿಲ್ಲೆಯ ಕುಕ್ಕೆ ಸುಬ್ರಮಣ್ಯದಲ್ಲಿಯೂ ನಾಗರಪಂಚಮಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಸಂಖ್ಯೆಯಲ್ಲಿ ಭಕ್ತಾಧಿಗಳು ನೆರೆದಿದ್ದು, ನಾಗನ ವಿಗ್ರಹಕ್ಕೆ ಹಾಲೆರೆಯಲು ಸರತಿ ಸಾಲಿನಲ್ಲಿ ನಿಂತಿರುವುದು ಎಲ್ಲೆಡೆ ಕಂಡು ಬರುತ್ತಿತ್ತು.

ದೇವಸ್ಥಾನಗಳಲ್ಲಿ ಮಾತ್ರವಲ್ಲದೆ ಪ್ರತಿಯೊಂದು ಕುಟುಂಬದ ಮೂಲ ಮನೆಗಳಲ್ಲಿಯೂ ನಾಗನಿಗೆ ಹಾಲಿನಭಿಷೇಕವನ್ನು ತುಳುನಾಡಿನಲ್ಲಿ ಅನಾದಿ ಕಾಲದಿಂದಲೂ  ನಡೆಸಿಕೊಂಡು ಬಂದಿದ್ದಾರೆ.

Nagarapanchami (13)

Nagarapanchami (33)

Nagarapanchami (7)

Nagarapanchami (5)

Nagarapanchami (9)

Nagarapanchami (24)

Nagarapanchami (42)

Nagarapanchami (43)

Nagarapanchami (45)

Nagarapanchami (48)

Nagarapanchami (52)

Nagarapanchami (53)

Nagarapanchami (54)

Nagarapanchami (56)

Nagarapanchami (57)

Nagarapanchami (64)

Nagarapanchami (65)Nagarapanchami (67)

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English