ಮಂಗಳೂರು: ಮಂಗಳೂರಿನಲ್ಲಿ ಸುರಿದ ಭಾರಿ ಗಾಳಿ ಸಹಿತ ಮಳೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಆವರಣದ ಒಳಗೆ ಇದ್ದ ಮರ ಧರೆಗುರುಳಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬದ ಮೇಲೆ ಬಿದ್ದ ಪರಿಣಾಮ ನಾಲ್ಕು ವಿದ್ಯುತ್ ಕಂಬಗಳು ಉರುಳಿ ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.
ಈ ಸಂದರ್ಭ ಪಾಂಡೇಶ್ವರ ಮಂಗಳಾದೇವಿ ರಸ್ತೆಯ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಈ ವೇಳೆ ಜೋರಾಗಿ ಗಾಳಿ ಮಳೆ ಇದ್ದುದ್ದರಿಂದ ಯಾವುದೇ ಅನಾಹುತ ಸಂಭವಿಸಲಿಲ್ಲ.
Click this button or press Ctrl+G to toggle between Kannada and English