ಶಿರಾಡಿ ಘಾಟ್​ನಲ್ಲಿ ಆ.25 ರವರೆಗೆ ರಸ್ತೆ ಸಂಚಾರ ನಿಷೇಧ: ಸಸಿಕಾಂತ್ ಸೆಂಥಿಲ್

10:50 AM, Friday, August 17th, 2018
Share
1 Star2 Stars3 Stars4 Stars5 Stars
(No Ratings Yet)
Loading...

sesikanth-senthilಮಂಗಳೂರು: ಪಶ್ಚಿಮ ಘಟ್ಟದಲ್ಲಿ ಸುರಿದ ಭಾರಿ ಮಳೆ ಹಿನ್ನೆಲೆಯಲ್ಲಿ ಗುಡ್ಡ ಕುಸಿತ ಸಂಭವಿಸಿರುವುದರಿಂದ ಆ.25 ರವರೆಗೆ ಶಿರಾಡಿ ಘಾಟ್ನಲ್ಲಿ ಸಂಚಾರ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನಿಂದ ಹಾಸನ ಮಾರ್ಗವಾಗಿ ಬೆಂಗಳೂರು ತಲುಪಲು ಹತ್ತಿರದ ರಸ್ತೆಯಾಗಿರುವ ಶಿರಾಡಿ ಘಾಟ್ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದವು.

ಪಶ್ಚಿಮ ಘಟ್ಟದಲ್ಲಿ ಹಾದು ಹೋಗುವ ಈ ರಸ್ತೆಯಲ್ಲಿ ಕಳೆದ ಮೂರು ದಿನಗಳಿಂದ ಹಲವು ಬಾರಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದಿರುವುದರಿಂದ ಸಂಚಾರ ಸ್ಥಗಿತಗೊಳಿಸಲಾಗಿದೆ. ಮಳೆ ಇದೇ ರೀತಿಯಲ್ಲಿ ಬರುವ ಸಾಧ್ಯತೆ ಇರುವುದರಿಂದ ಈ ರಸ್ತೆಯಲ್ಲಿ ಗುಡ್ಡ ಕುಸಿತ ಇನ್ನಷ್ಟು ಆಗುವ ಸಾಧ್ಯತೆಗಳಿದ್ದು, ಅನಾಹುತಗಳು ಸಂಭವಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ.

ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 115 ಹಾಗೂ 1989 ರ ನಿಯಮ 221 ಎ(5) ರಲ್ಲಿ ಇರುವ ಅಧಿಕಾರವನ್ನು ಬಳಸಿಕೊಂಡು ಇಂದಿನಿಂದ ಆ.25 ರ ಬೆಳಿಗ್ಗೆ 6 ಗಂಟೆವರೆಗೆ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಪೂರ್ಣ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English