ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪಂಚಭೂತಗಳಲ್ಲಿ ಲೀನ

7:14 PM, Friday, August 17th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Vajapayee ನವದೆಹಲಿ : ಭಾರತ ರತ್ನ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಯಮುನಾ ನದಿಯ ದಡದಲ್ಲಿ ಶುಕ್ರವಾರ ಸಂಜೆ 4.55 ಕ್ಕೆ  ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಸಕಲ ಸರ್ಕಾರಿ ಗೌರವಾಧಾರಗಳೊಂದಿಗೆ ಪಂಚಭೂತಗಳಲ್ಲಿ ಲೀನರಾದರು.

ಹಿಂದೂ ಬ್ರಾಹ್ಮಣ ಸಂಪ್ರದಾಯದಂತೆ ಪುರೋಹಿತರು ಹಾಗೂ ಕುಟುಂಬ ಸದಸ್ಯರು ಅಂತಿಮ ವಿಧಿ ವಿಧಾನ ಕಾರ್ಯಗಳನ್ನು ನೆರವೇರಿಸಿದರು. 21 ಬಾರಿ ಕುಶಾಲ ತೋಪು ಸಿಡಿತ ಹಾಗೂ ಅಟಲ್ ಬಿಹಾರಿ ವಾಜಪೇಯಿ ಕೀ ಜೈ ಘೋಷಣೆ ನಡುವೆ ವಾಜಪೇಯಿ ಅವರ ದತ್ತುಪುತ್ರಿ ನಮಿತಾ ಭಟ್ಟಾಚಾರ್ಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಸಾರ್ಕ್ ರಾಷ್ಟ್ರಗಳ ಗಣ್ಯರು , ಕೇಂದ್ರ ಸಂಪುಟದ ಸಚಿವರು, ಎಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ನೂರಾರು ಮಂದಿ ಅಂತ್ಯಕ್ರಿಯೆ ಸ್ಥಳದಲ್ಲಿ ಹಾಜರಿದ್ದು, ಅಗಲಿದ ಹಿರಿಯ ನಾಯಕನಿಗೆ ಅಂತಿಮ ವಿದಾಯ ಹೇಳಿದರು.

ಇದಕ್ಕೂ ಮುನ್ನಾ ಬಿಜೆಪಿ ಕೇಂದ್ರ ಕಚೇರಿಯಿಂದ ಮೆರವಣಿಗೆ ಮೂಲಕ ಸಾಗಿ ಬಂದ ವಾಜಪೇಯಿ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರಮೋದಿ, ಸಾರ್ಕ್ ರಾಷ್ಟ್ರಗಳ ಹಿರಿಯ ನಾಯಕರು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಬಿಜೆಪಿ ಹಿರಿಯ ಮುಖಂಡ ಎಲ್ . ಕೆ. ಅಡ್ವಾಣಿ, ಪುಷ್ಪನಮನ ಸಲ್ಲಿಸಿದರು.

Vajapayee

Vajapayee

Vajapayee

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English