ಸುಳ್ಯ : ಶುಕ್ರವಾರ ಸಂಭವಿಸಿದ ಭೂಕುಸಿತದಿಂದಾಗಿ ಮಾಣಿ-ಮೈಸೂರು ಹೆದ್ದಾರಿ ಮಧ್ಯೆದಲ್ಲಿರುವ ಜೋಡುಪಾಲ ಎಂಬಲ್ಲಿ ರಸ್ತೆಯು ಇಬ್ಭಾಗವಾಗಿದೆ. ಇಬ್ಬರು ಮೃತಪಟ್ಟಿದ್ದು, ಅಲ್ಲದೆ 3 ಮಂದಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ .
ರಾಷ್ಟ್ರೀಯ ವಿಪತ್ತು ನಿಗ್ರಹ ದಳದ 26 ಮಂದಿ, 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ದಳ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ 100ಕ್ಕೂ ಅಧಿಕ ಸ್ವಯಂಸೇವಕರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಭೂ ಕುಸಿತದಿಂದಾಗಿ ಮೂರು ಮನೆಗಳು ಮಳೆಯಲ್ಲಿ ಕೊಚ್ಚಿಹೋಗಿವೆ. ಮಳೆಯು ಕಾರ್ಯಚರಣೆಗೆ ಅಡ್ಡಿಪಡಿಸುತ್ತಿದ್ದು ಅಲ್ಲದೆ ಹೆಲಿಕಾಪ್ಟರ್ ಮೂಲಕವು ರಕ್ಷಣಾ ಕಾರ್ಯಚರಣೆ ಮುಂದುವರಿದಿದೆ.
ಅರಂತೋಡು ತೆಕ್ಕಿಲ್ ಹಾಲ್, ಸಂಪಾಜೆ, ಪೆರಾಜೆಯ ಶಾಲೆಗಳಲ್ಲಿ ಗಂಜಿ ಕೇಂದ್ರಗಳನ್ನು ಸ್ಥಾಪಿಸಿ ಜೋಡುಪಾಲದ 4 ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ 25 ಮನೆಗಳಲ್ಲಿರುವ ಜನರನ್ನು ಖಾಲಿ ಮಾಡಲಾಗಿದ್ದು ಅವರನ್ನು ಅಲ್ಲಿ ಇರಿಸಲಾಗಿದೆ.
ವಿವಿಧ ಸಂಘ ಸಂಸ್ಥೆಗಳು ಸಂಗ್ರಹಿಸಿದ ಆಹಾರ, ಬಟ್ಟೆ, ಇತ್ಯಾದಿ ವಸ್ತುಳನ್ನು ವಿತರಿಸಲಾಗುತ್ತಿದೆ.
ಜೋಡುಪಾಲದಲ್ಲಿ ಭೂಕುಸಿತ ಪ್ರದೇಶಕ್ಕೆ ಸಚಿವ ಯು.ಟಿ.ಖಾದರ್, ಜಿಲ್ಲಾಧಿಕಾರಿ , ಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ದಳ, ದ.ಕ. ಪೊಲೀಸ್, ಗೃಹರಕ್ಷಕ ದಳ ಹಾಗೂ ಸ್ವಯಂ ಸೇವಕರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಅಲ್ಲದೆ ಕಾರ್ಯಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿ, ಹೆಲಿಕಾಪ್ಟರ್ ಗ ಳನ್ನು ನಿಯೋಜಿಸಲಾಗುವುದು ಎಂದು ಡಿಸಿ ಹೇಳಿದ್ದಾರೆ
ಜೋಡುಪಾಲ 4 ಕಿ.ಮೀ ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸಲಾಗುವುದು. ಕೆಲವು ಮಂದಿಯು ನಾಪತ್ತೆಯಾಗಿರುವ ಶಂಕೆಯಿದ್ದು, ದ.ಕ ಪೊಲೀಸ್ ಹಾಗೂ ರಾಷ್ಟ್ರೀಯ ವಿಪತ್ತು ನಿಗ್ರಹ ದಳದಿಂದ ರಕ್ಷಣಾ ಕಾರ್ಯಚರಣೆ ಮುಂದುವರಿಯಲಿದೆ ಎಂದು ಡಾ. ರವಿಕಾಂತೇಗೌಡ, ಎಸ್ಪಿ ಹೇಳಿದ್ದಾರೆ
Click this button or press Ctrl+G to toggle between Kannada and English