ಶಾಸಕ ವೇದವ್ಯಾಸ ಕಾಮತ್ ವಿನಂತಿ ಮೇರೆಗೆ ನಾಗಾಲ್ಯಾಂಡ್ ರಾಜ್ಯಪಾಲರಿಂದ ಕೊಡಗು ಜಿಲ್ಲೆಗೆ 5 ಲಕ್ಷ ರೂ. ದೇಣಿಗೆ

5:56 PM, Wednesday, August 22nd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Vedavyas kamathಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ವಿನಂತಿ ಮೇರೆಗೆ ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರು ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ 5 ಲಕ್ಷ ರೂ. ದೇಣಿಗೆಯನ್ನು ವೈಯ್ಯಕ್ತಿಕವಾಗಿ ನೀಡಿದ್ದಾರೆ.

ಅಲ್ಲದೆ ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿರು ಹಾನಿಗೆ ಪರಿಹಾರವಾಗಿ ನಾಗಾಲ್ಯಾಂಡ್ ರಾಜ್ಯ ಸರಕಾರದ ವತಿಯಿಂದ 20 ಲಕ್ಷ ರೂಪಾಯಿಯನ್ನು ಶಾಸಕರ ಮನವಿಯಂತೆ ಬಿಡುಗಡೆ ಮಾಡಲಾಗಿದೆ.

ಕರ್ನಾಟಕದ ನೆರೆ ರಾಜ್ಯ ಕೇರಳಕ್ಕೂಶಾಸಕ ವೇದವ್ಯಾಸ ಕಾಮತ್ ಅವರ ವಿನಂತಿಯ ಮೇರೆಗೆ ರಾಜ್ಯಪಾಲರು 1 ಕೋಟಿ ರೂಪಾಯಿ ಪರಿಹಾರ ಘೋಷಿಸಲು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ.

ತಮ್ಮ ವಿನಂತಿಯನ್ನು ಪುರಸ್ಕರಿಸಿ ನೆರೆಪೀಡಿತ ಪ್ರದೇಶಕ್ಕೆ ಶೀಘ್ರದಲ್ಲಿ ಹಣ ಬಿಡುಗಡೆ ಮಾಡಲು ಸಹಕರಿಸಿದ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರಿಗೆ ಶಾಸಕ ಡಿ.ವೇದವ್ಯಾಸ ಕಾಮತ್ ಕೃತಜ್ಞತೆ ಸಲ್ಲಿಸಿದ್ದಾರೆ.

ಸಂಕಷ್ಟದಲ್ಲಿ ಜನರಿಗಾಗಿ ಪಿ.ಬಿ.ಆಚಾರ್ಯ ಅವರ ಮನಸ್ಸು ಯಾವಾಗಲೂ ಮಿಡಿಯುತ್ತದೆ. ಕೇರಳ ಮತ್ತು ಕೊಡಗು ಜನರು ಆದಷ್ಟು ಬೇಗ ಸಹಜ ಜೀವನಕ್ಕೆ ಮರಳಲಿ ಎಂದು ಪಿ.ಬಿ.ಆಚಾರ್ಯ ಅವರು ಹಾರೈಸಿದ್ದಾರೆ ಎಂದು ಶಾಸಕರು ಹೇಳಿದ್ದಾರೆ.

ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಸಂತ್ರಸ್ಥರ ನಿಧಿಗೆ ಬಿಜೆಪಿಯ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರ ಒಂದು ತಿಂಗಳ ವೇತನ ನೀಡಲಾಗುತ್ತದೆ’ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English