ಮಂಗಳೂರು: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನದಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿಯೋರ್ವನನ್ನು ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಬಂಟ್ವಾಳ ತಾಲೂಕಿನ ಕಕ್ಕೆಪದವು ಆರೊಟು ನಿವಾಸಿ ಲಕ್ಷಣ ದಾಸಯ್ಯ(58) ಅವರು ಆತ್ಮಹತ್ಯೆಗೆ ಯತ್ನಿಸಿದವರು.
ಲಕ್ಷಣ ಅವರ ಪತ್ನಿ ಗುಲಾಬಿ ಅವರು ಕಳೆದ ಒಂದು ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು. ಅವರ ಚಿಕಿತ್ಸೆಗೆ ಹಣವನ್ನು ಹೊಂದಿಸಲಾಗದ ಪರಿಸ್ಥಿತಿಯಿಂದ ಮನನೊಂದ ಲಕ್ಷಣ ಅವರು ಮನೆಯಿಂದ ಬಿಸಿರೋಡಿಗೆ ಬಂದು ಬಳಿಕ ಪಾಣೆ ಮಂಗಳೂರು ಸೇತುವೆಯಿಂದ ನದಿಗೆ ಹಾರಿದ್ದರು.
ಕೂಡಲೇ ಇದನ್ನು ಗಮನಿಸಿದ ಗೂಡಿನ ಬಳಿಯ ನಿವಾಸಿಗಳು ಲಕ್ಷಣ ಅವರನ್ನು ಬಚಾವ್ ಮಾಡಿದ್ದಾರೆ. ಬಳಿಕ ಬಂಟ್ವಾಳ ನಗರ ಠಾಣೆಗೆ ಕರೆದು ತಂದು ಪೊಲೀಸರ ಕೈಗೆ ಒಪ್ಪಿಸಿದ್ದಾರೆ.
Click this button or press Ctrl+G to toggle between Kannada and English