ನಗರಸಭೆ ಚುನಾವಣೆ: ಯು.ಟಿ.ಖಾದರ್‌ ಆಪ್ತನಿಗೆ ಸೋಲು..ಕಿಡಿಕೇಡಿಗಳಿಂದ ಕಲ್ಲು ತೂರಾಟ!

12:19 PM, Monday, September 3rd, 2018
Share
1 Star2 Stars3 Stars4 Stars5 Stars
(No Ratings Yet)
Loading...

ullala-khaderಮಂಗಳೂರು: ನಗರ ಸಭೆ ಚುನಾವಣಾ ಫ‌ಲಿತಾಂಶ ಪ್ರಕಟವಾಗಿದ್ದು , ವಿಜೇತ ಪಕ್ಷೇತರ ಅಭ್ಯರ್ಥಿ ಸೇರಿ ಹಲವರ ಅಂಗಡಿಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಸೋಮವಾರ ನಡೆದಿದೆ.

19 ನೇ ವಾರ್ಡ್‌ನಲ್ಲಿ ಸಚಿವ ಯು.ಟಿ.ಖಾದರ್‌ ಅವರ ಆಪ್ತ, ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಉಸ್ಮಾನ್‌ ಕಲ್ಲಾಪು ಅವರು ಪಕ್ಷೇತರ ಅಭ್ಯರ್ಥಿ ಮುಶ್ತಾಕ್‌ ಎದುರು ಸೋಲು ಅನುಭವಿಸಿದ್ದಾರೆ.

ಸೋಲಿನ ಬಳಿಕ ಕಲ್ಲಾಪುವಿನಲ್ಲಿ ಅಹಿತಕರ ಘಟನೆ ನಡೆದಿದ್ದು, ಕಿಡಿಕೇಡಿಗಳು ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್‌ ನಡೆಸಿದ್ದಾರೆ.

ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English