- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸಚಿವ ಯು.ಟಿ.ಖಾದರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು..!

u-t-kadher [1]ಮಂಗಳೂರು: ರಾಜ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಡಗಾಲಿನ ತೀವ್ರ ನೋವಿಗೆ ಚಿಕಿತ್ಸೆ ಪಡೆಯಲು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯ ಹಾಗೂ ಜಿಲ್ಲೆಯಾದ್ಯಂತ ಹೆಚ್ಚಿನ ಸತತ ಪ್ರಯಾಣದಿಂದಾಗಿ ಕಳೆದೊಂದು ವಾರದಿಂದ ತೀವ್ರ ಕಾಲು ನೋವು ಪ್ರಾರಂಭವಾಗಿತ್ತು. ವೈದ್ಯರ ಸಲಹೆ ಮೇರೆಗೆ ಇತ್ತೀಚೆಗೆ ಚಿಕಿತ್ಸೆಯನ್ನು ಅವರು ಪಡೆದಿದ್ದರು. ಮತ್ತೆ ನೋವು ಮರುಕಳಿಸಿದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.