ಮಂಗಳೂರು: ಪ್ರೀತಿಸುವುದಾಗಿ ಹೇಳಿ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.
ಯತೀಶ್ (28) ಎಂಬಾತ ಬಂಧಿತ ಆರೋಪಿ. ಆರೋಪಿಯು ತನ್ನ ಪರಿಚಯದ ಎಂಟನೇ ತರಗತಿ ಕಲಿಯುತ್ತಿರುವ 14 ವರ್ಷದ ವಿದ್ಯಾರ್ಥಿನಿಯನ್ನು ಐದು ತಿಂಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಪ್ರೀತಿಸುವುದಾಗಿ ಹೇಳಿ ದೈಹಿಕ ಸಂಪರ್ಕ ನಡೆಸಿದ್ದ ಎನ್ನಲಾಗಿದೆ.
ಯುವತಿ ಇದೀಗ ಗರ್ಭವತಿಯಾಗಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Click this button or press Ctrl+G to toggle between Kannada and English