- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ..!

suicide [1]ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಬ್ಲಾಜೆಯಲ್ಲಿ ಬಾಲಕಿಯೊಬ್ಬಳು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿಗೆ 16 ವರ್ಷವಾಗಿತ್ತು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ಯಾವುದೋ ಕಾರಣದಿಂದ ಮನನೊಂದು ಸೀಮೆಎಣ್ಣೆ ಮೈಗೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎನ್ನಲಾಗಿದೆ. ತೀವ್ರ ಸುಟ್ಟ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಮೃತರ ತಾಯಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.