ಮೂಡಬಿದಿರೆ: ಇಂದಿನ ಸಮಾಜದಲ್ಲಿ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪೋಷಕರಲ್ಲಿನ ಅರಿವಿನ ಕೊರತೆ ಈ ಸಮಸ್ಯೆಗೆ ಮೂಲ ಕಾರಣ ಎಂದು ಮಂಗಳೂರು ಇಂಚರಾ ಫೌಂಡೇಷನ್‌ನ ನಿರ್ದೇಶಕ ಪ್ರೀತಮ್ ರೊಡ್ರಿಗಸ್ ತಿಳಿಸಿದರು.
ಅವರು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮನಶಾಸ್ತ್ರ ಮತ್ತು ಸಮಾಜಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ ಮಕ್ಕಳ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ ಎಂಬ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಮಕ್ಕಳ ಮೇಲಿನ ದೌರ್ಜನ್ಯ ಭಾರತದಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದ್ದು ಅದರಲ್ಲೂ ಸಂಬಂಧಿಕರೆ ದೌರ್ಜನ್ಯ ಎಸಗುತ್ತಿರುವುದು ದುರದೃಷ್ಟಕರ ಸಂಗತಿ ಎಂದರು. ಅತೀ ಕಿರಿಯ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾಗುತ್ತಿದ್ದು, ಎನೂ ಅರಿಯದ ಮುಗ್ದ ಮಕ್ಕಳು ಬಲಿಯಾಗುತ್ತಿದ್ದಾರೆ. ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಅನೇಕ ಕಾಯಿದೆಗಳು ಚಾಲ್ತಿಯಲ್ಲಿದ್ದರೂ, ದೌರ್ಜನ್ಯ ತಡೆಯುವಲ್ಲಿ ಇವುಗಳು ವಿಫಲವಾಗಿವೆ ಎಂದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಾಯೋಗಿಕ ಚಟುವಟಿಕೆಯ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಮನಶಾಸ್ತ್ರ ವಿಭಾಗದ ಸಂಯೋಜಕಿ ದೀಪಾ ಕೊಠಾರಿ, ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸೋನಿಯಾ ನಿರೂಪಿಸಿದರು.
Click this button or press Ctrl+G to toggle between Kannada and English