ಪುತ್ತೂರು : ಪುತ್ತೂರು ತಾಲೂಕು ಪತ್ರಕರ್ತರ ಸಂಘ(ರಿ.) ಇದರ 2018-19ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ತಿಂಗಳಾಡಿ ಮತ್ತು ಕಾರ್ಯದರ್ಶಿಯಾಗಿ ಗಣೇಶ್ ಕಲ್ಲರ್ಪೆ ಅವಿರೋಧವಾಗಿ ಆಯ್ಕೆಯಾದರು.
ಗುರುವಾರ ಪುತ್ತೂರಿನ ಪತ್ರಿಕಾ ಭವನದಲ್ಲಿ ನಡೆದ ನೂತನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಉಮಾಪ್ರಸಾದ್ ನಡುಬೈಲು ಮತ್ತು ಸರ್ವೇಶ್ ಕುಮಾರ್ ಉಪ್ಪಿನಂಗಡಿ, ಜೊತೆ ಕಾರ್ಯದರ್ಶಿಯಾಗಿ ಅನೀಶ್ ಮರೀಲ್, ಖಜಾಂಜಿಯಾಗಿ ಕೃಷ್ಣಪ್ರಸಾದ್ ಬಲ್ನಾಡು ಆಯ್ಕೆಯಾದರು.
ಸಂಘದ ಹಿರಿಯ ಸದಸ್ಯರಾದ ಬಿ.ಟಿ. ರಂಜನ್ ಚುನಾವಣಾಧಿಕಾರಿಯಾಗಿ ಹಾಗೂ ಮೇಘ ಪಾಲೆತ್ತಾಡಿ ಮತ್ತು ಸಂಶುದ್ದೀನ್ ಸಂಪ್ಯ ಉಪ ಚುನಾವಣಾಧಿಕಾರಿಗಳಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ಚುನಾವಣೆ ಪ್ರಕ್ರಿಯೆ ಬಳಿಕ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ನಡೆಯಿತು. ನಿರ್ಗಮನ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ಮತ್ತು ನಿರ್ಗಮನ ಕಾರ್ಯದರ್ಶಿ ಕಿರಣ್ ಪ್ರಸಾದ್ ಕುಂಡಡ್ಕ ಅವರು ನೂತನ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರಿಸಿದರು.
ನೂತನ ಕಾರ್ಯದರ್ಶಿ ಗಣೇಶ್ ಕಲ್ಲರ್ಪೆ ಸ್ವಾಗತಿಸಿದರು. ಉಪಾಧ್ಯಕ್ಷ ಉಮಾಪ್ರಸಾದ್ ರೈ ವಂದಿಸಿದರು.
Click this button or press Ctrl+G to toggle between Kannada and English