ಮಂಗಳೂರು : ಶಿವಭಾಗ್ನ ಹೊಟೇಲ್ವೊಂದಕ್ಕೆ ಸೋಮವಾರ ನಡೆದ ಭಾರತ್ ಬಂದ್ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕೇಸು ದಾಖಲಾಗಿದೆ.
ಸೋಮವಾರ ಬೆಳಗ್ಗೆ ನಂತೂರು ಕಡೆಯಿಂದ ಬೆಂದೂರ್ವೆಲ್ ಕಡೆಗೆ ಬೈಕ್ನಲ್ಲಿ ಹೆಲ್ಮೆಟ್ ಧರಿಸಿದ ಇಬ್ಬರು ದುಷ್ಕರ್ಮಿಗಳು ಬಂದು ಅದರಲ್ಲಿ ಒಬ್ಬಾತ ಹೊಟೇಲ್ ಮುಂಭಾಗ ಬಂದು ಹೊಟೇಲ್ ಮೇಲೆ ಕಲ್ಲು ತೂರಾಟ ಮಾಡಿದ್ದಾನೆ. ಈ ವೇಳೆ ಶಬ್ದ ಕೇಳಿ ಹೊರಗೆ ಓಡಿ ಬಂದ ಹೊಟೇಲ್ ಸಿಬ್ಬಂದಿ ದುಷ್ಕರ್ಮಿಯನ್ನು ಹಿಡಿಯಲು ಪ್ರಯತ್ನಿಸಿದಾಗ ಆತ ಬೈಕ್ ಮೂಲಕ ಪರಾರಿಯಾಗಿದ್ದಾನೆ.
ಕಲ್ಲು ತೂರಾಟದ ವಿಡಿಯೋ ಸಿಸಿ ಟಿವಿಯಲ್ಲಿ ದಾಖಲಾಗಿದ್ದು, ಇದನ್ನು ಕ್ಲಿಪ್ಪಿಂಗ್ ಪೊಲೀಸರಿಗೆ ನೀಡಲಾಗಿದೆ. ಈ ಕುರಿತು ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English