[1]ಮಂಗಳೂರು: ಇಲ್ಲಿನ ಜೋಕಟ್ಟೆ ಬಳಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ 35ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.
ಮಂಗಳೂರಿನ ಶಾಲಾ-ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿಗಳೂ ಸೇರಿ 35ಕ್ಕೂ ಅಧಿಕ ಮಂದಿಗೆ ಗಾಯಾಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿನ ಕಾಟಿಪಳ್ಳದಿಂದ ಮಂಗಳೂರಿಗೆ ಬರುತ್ತಿದ್ದ ಬಸ್, ಬೈಕಂಪಾಡಿ ಬಳಿಯ ಜೋಕಟ್ಟೆಯಲ್ಲಿ ಎದುರು ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆ ಬದಿಗೆ ಬಿದ್ದಿದೆ.
ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.