ರಫೇಲ್ ಡೀಲ್​ನಲ್ಲಿ ಅವ್ಯವಹಾರ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

5:06 PM, Tuesday, September 11th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

congressಮಂಗಳೂರು: ರಫೇಲ್ ಡೀಲ್ನಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು.

ಮಂಗಳೂರಿನ ಜ್ಯೋತಿ ಸರ್ಕಲ್ನಿಂದ ದ.ಕ. ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ರಮನಾಥ ರೈ, ರಫೇಲ್ ಡೀಲ್ನ ಹಗರಣದ ಮೂಲಕ ಬಿಜೆಪಿ ತನ್ನ ಖಜಾನೆಯನ್ನು ತುಂಬಿಸಿಕೊಂಡಿದೆ ಎಂದು ಆರೋಪಿಸಿದರು. ಅಲ್ಲದೆ ಬೋಫೋರ್ಸ್ ನಂತೆ ರಫೇಲ್ ಡೀಲ್ ಹಗರಣದ ಬಗ್ಗೆಯೂ ತನಿಖೆಯಾಗಲಿ ಎಂದು ಆಗ್ರಹಿಸಿದರು.

ಪ್ರತಿಭಟನಾ ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ ಆರ್ ಲೋಬೋ, ಮೊಯ್ದಿನ್ ಬಾವ ಸೇರಿದಂತೆ ಮೊದಲಾದವರು ಭಾಗಿಯಾಗಿದ್ದರು.

congress-2

congress-21

congress-3

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English