ಬಿಜೆಪಿಯವರು ಸರ್ಕಾರ ರಚಿಸುವ ಹಗಲುಗನಸು ಕಾಣ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

3:38 PM, Wednesday, September 12th, 2018
Share
1 Star2 Stars3 Stars4 Stars5 Stars
(No Ratings Yet)
Loading...

malikarjun-khargeಬೆಂಗಳೂರು: ಬಿಜೆಪಿಯವರು ಸರ್ಕಾರ ರಚಿಸುವ ಹಗಲುಗನಸು ಕಾಣ್ತಿದ್ದಾರೆ ಎಂದು ಲೋಕಸಭೆ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವ ರಮೇಶ್ ಜಾರಕಿಹೊಳಿ ಅವರ ಜೊತೆ ನಾನು ಮಾತಾಡ್ತೀನಿ. ಯಾವ ಸಮಸ್ಯೆಯೂ ಕಂಡಿಲ್ಲ. ಸದ್ಯಕ್ಕೆ ಏನು ಗೊಂದಲಗಳಿವೆ ನನಗೂ ಇನ್ನೂ ಸರಿಯಾಗಿ ಗೊತ್ತಿಲ್ಲ. ಕೆಲವು ಮಾಧ್ಯಮಗಳಲ್ಲಿ ಈ ವಿಚಾರವನ್ನು ಅತಿಯಾಗಿ ವೈಭವೀಕರಿಸಿ ತೋರಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸರ್ಕಾರ ಸುಭದ್ರವಾಗಿದೆ. ಯಾವ ಆತಂಕವೂ ಇಲ್ಲ. ಸರಿಯಾಗಿ ಸರ್ಕಾರ ನಡೆಯುತ್ತಿದ್ದು, ಐದು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಅನುಮಾನ ಬೇಡ. ಬಿಜೆಪಿ ವಿಫಲ ಯತ್ನ ನಡೆಸುತ್ತಿದೆ. ಅದು ಯಶಸ್ಸು ಕಾಣದು ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English