ಚಲಿಸುತ್ತಿದ್ದ ವ್ಯಾನ್‌ಗೆ ಆಕಸ್ಮಿಕ ಬೆಂಕಿ: ಚಾಲಕ ಪಾರು

4:33 PM, Friday, September 14th, 2018
Share
1 Star2 Stars3 Stars4 Stars5 Stars
(No Ratings Yet)
Loading...

maruthi-van
ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಮಾರುತಿ ವ್ಯಾನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಶಾದಿಮಹಲ್ ಬಳಿ ನಡೆದಿದೆ.

ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಗ್ನಿ ಅವಘಡ ಸಂಭವಿಸುತ್ತಿದ್ದಂತೆಯೇ ಚಾಲಕ ವ್ಯಾನ್‌ ಬಿಟ್ಟು ಪ್ರಾಣ ಉಳಿಸಿಕೊಂಡಿದ್ದಾರೆ.

ಘಟನೆ ಸಂಬಂಧ ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English