ಮುಂದಿನ 5 ವರ್ಷಗಳ ಕಾಲ ಎಚ್‌ಡಿಕೆಯೇ ಸಿಎಂ: ವೀರಪ್ಪ ಮೊಯ್ಲಿ

5:06 PM, Friday, September 14th, 2018
Share
1 Star2 Stars3 Stars4 Stars5 Stars
(No Ratings Yet)
Loading...

virappa-moily
ಹಾಸನ: ಸಮ್ಮಿಶ್ರ ಸರಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಅಲ್ಲದೆ, ಐದು ವರ್ಷಗಳ ಕಾಲ ಎಚ್‌.ಡಿ. ಕುಮಾರಸ್ವಾಮಿಯೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳನ್ನು ಮೊಯ್ಲಿ ತಳ್ಳಿಹಾಕಿದರು. ಅಲ್ಲದೆ, ಎಚ್‌ಡಿಕೆಯೇ ಮುಂದಿನ 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಖಚಿತ ಭರವಸೆ ನೀಡಿದ್ದಾರೆ.ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕಕ್ಕೆ ತೆರೆ ಬೀಳುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಮೊಯ್ಲಿ ಮಾತನಾಡಿದರು.

ಒಬ್ಬರಿಂದ ಅಥವಾ ಇಬ್ಬರಿಂದ ಈ ಸರಕಾರವನ್ನು ಉರುಳಿಸಲು ಸಾಧ್ಯವಿಲ್ಲ. ಆಪರೇಷನ್‌ ಕಮಲ ನಡೆಸಲು ಮುಂದಾಗಿರುವ ಬಿಜೆಪಿ ನಾಯಕರು ಅಧಿಕಾರದ ದುರಾಸೆ ಉಳ್ಳವರು ಹಾಗೂ ನಾಚಿಕೆ ಇಲ್ಲದವರು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನೊಂದೆಡೆ, ಸಾವಿರಾರು ಕೋಟಿ ರೂ. ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ ವಿಜಯ್‌ ಮಲ್ಯರನ್ನು ಭೇಟಿಯಾಗಿದ್ದಕ್ಕೆ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ರಾಜೀನಾಮೆ ಕೊಡಬೇಕೆಂದು ಜನತೆ ಆಗ್ರಹಿಸುತ್ತಿದ್ದಾರೆ ಎಂದು ಮೊಯ್ಲಿ ಹೇಳಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English