ಹುಬ್ಬಳ್ಳಿ: ಕಲಘಟಗಿ ಬಿಜೆಪಿ ಶಾಸಕ ಸಿ.ಎಂ. ನಿಂಬಣ್ಣನವರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.ತೀವ್ರ ಗಂಟಲು ನೋವಿನಿಂದ ಬಳಲುತ್ತಿದ್ದ ಶಾಸಕ ಸಿ.ಎಂ.ನಿಂಬಣ್ಣವರ್ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಆಸ್ಪತ್ರೆಯಲ್ಲಿಯೇ ನಿಂಬಣ್ಣವರ್ಗೆ ಚಿಕಿತ್ಸೆ ಮುಂದುವರೆದಿದೆ.
ಧಾರವಾಡ ಜಿಲ್ಲೆ ಕಲಘಟಗಿ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಇವರು, ಕಳೆದ ಚುನಾವಣೆಯಲ್ಲಿ ಅಂದು ಸಚಿವರಾಗಿದ್ದ ಸಂತೋಷ್ ಲಾಡ್ರನ್ನು ಭಾರಿ ಮತಗಳ ಅಂತರದಿಂದ ಸೋಲಿಸಿದ್ದಾರೆ.
Click this button or press Ctrl+G to toggle between Kannada and English