ತಂದೆ-ಮಕ್ಕಳಿಗೆ ಹತಾಶ ಭಾವನೆ ಕಾಡ್ತಿದೆ: ಶಾಸಕ ಎಂ.ಪಿ. ರೇಣುಕಾಚಾರ್ಯ

3:27 PM, Saturday, September 15th, 2018
Share
1 Star2 Stars3 Stars4 Stars5 Stars
(No Ratings Yet)
Loading...

renukacharyaಬೆಂಗಳೂರು: ನಿನ್ನೆ ಸಿಎಂ ಬಹಳ ಹಗುರವಾಗಿ ಮಾತಾಡಿದ್ದಾರೆ. ತಂದೆ-ಮಕ್ಕಳಿಗೆ ಹತಾಶ ಭಾವನೆ ಕಾಡ್ತಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಅಭಿಪ್ರಾಯಪಟ್ಟಿದ್ದಾರೆ.

ಕಿಂಗ್ ಪಿನ್ಗಳ ಕುರಿತಾಗಿ ಸಿಎಂ ಕುಮಾರಸ್ವಾಮಿ ಹೇಳಿಕೆ ವಿಚಾರ ಸಂಬಂಧ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಮಾತನಾಡಿದ ರೇಣುಕಾಚಾರ್ಯ, ‘ಹೆಚ್ ಡಿ. ರೇವಣ್ಣ, ಹೆಚ್.ಡಿ. ಕುಮಾರಸ್ವಾಮಿ 2006ರ ಘಟನೆ ಮರೆತು ಬಿಟ್ಟಿರುವಂತಿದೆ’ ಯಡಿಯೂರಪ್ಪ ಯಾವತ್ತೂ ಬೇರೆ ಪಕ್ಷಗಳ ಬಗ್ಗೆ ಹಗುರವಾಗಿ ಮಾತಾಡಿಲ್ಲ. ಕುಮಾರಸ್ವಾಮಿ ಸುತ್ತಮುತ್ತ ಇರುವವರು ರೌಡಿಗಳು, ಕಿಂಗ್ಪಿನ್ಗಳು ಎಂದು ಆರೋಪಿಸಿದರು.

ಗೋವಾದಲ್ಲಿ ಕ್ಯಾಸಿನೋ ನಡೆಸುತ್ತಿದ್ದವರಿಗೆ ಕುಮಾರಸ್ವಾಮಿ ಟಿಕೆಟ್ ಕೊಟ್ಟಿಲ್ವಾ? ಜಮೀರ್ ಅಹಮದ್ ವಿರುದ್ಧ ಜೆಡಿಎಸ್ ಯಾರಿಗೂ ಟಿಕೆಟ್ ಕೊಟ್ಟಿಲ್ವಾ?10 ಜನ ಬಿಜೆಪಿ ಶಾಸಕರು ಸಂಪರ್ಕದಲ್ಲಿ ಇರುವ ಬಗ್ಗೆ ಜೆಡಿಎಸ್ ಶಾಸಕರು ಹೇಳುತ್ತಿದ್ದಾರೆ. ಒಬ್ಬನೇ ಒಬ್ಬ ಬಿಜೆಪಿ ಶಾಸಕರ ಹೆಸರು ಹೇಳಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಈ ಬಗ್ಗೆ ಬಿಜೆಪಿ ಅವರಿಗೆ ಸವಾಲು ಹಾಕುತ್ತಿದೆ. ಯಡಿಯೂರಪ್ಪ ವಿರುದ್ಧ ಹಗುರ ಮಾತು ಬೇಡ. ನಮಗೂ ಎಲ್ಲಾ ಗೊತ್ತಿದೆ, ಆದರೆ ನಮಗೆ ಸಂಸ್ಕಾರ, ಸಂಸ್ಕೃತಿ ಇದೆ ಎಂದು ವಾಗ್ದಾಳಿ ನಡೆಸಿದರು.

Vedavyas Diwali

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English