ನೂತನ ಬಿಷಪ್ ರೆ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ದೀಕ್ಷಾವಿಧಿ ಸ್ವೀಕಾರ

3:45 PM, Saturday, September 15th, 2018
Share
1 Star2 Stars3 Stars4 Stars5 Stars
(No Ratings Yet)
Loading...

bishopಮಂಗಳೂರು: ಮಂಗಳೂರು ಧರ್ಮ ಪ್ರಾಂತ್ಯದ ನೂತನ ಬಿಷಪ್ ಆಗಿ ರೆ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಇಂದು ದೀಕ್ಷಾವಿಧಿ ಸ್ವೀಕರಿಸಿದರು.

ಮಂಗಳೂರಿನ ರೊಜಾರಿಯೊ ಕೆಥೆಡ್ರೆಲ್ನಲ್ಲಿ ನಡೆದ ಈ ಸಮಾರಂಭಕ್ಕೆ ಮಂಗಳೂರು ಧರ್ಮಪ್ರಾಂತ್ಯದ ಸಾವಿರಾರು ಮಂದಿ ಸಾಕ್ಷಿಯಾದರು. 22 ವರ್ಷಗಳ ಬಳಿಕ ಇಂತಹ ಅಪರೂಪದ ಧಾರ್ಮಿಕ ಕಾರ್ಯಕ್ರಮ ನಡೆದಿದ್ದು ಈ ಧಾರ್ಮಿಕ ಕಾರ್ಯಕ್ರಮಕ್ಕೆ ಭಾರತದ ಪೋಪ್ ಪ್ರತಿನಿಧಿಯಾದ ಕೌನ್ಸಿಲರ್ ರೆ. ಝ್ಹಾವಿಯರ್ ಡಿ ಫೆರ್ನಾಂಡಿಸ್ ಜಿ, ದೇಶದ ವಿವಿಧ ಭಾಗಗಳ 25 ಕ್ಕೂ ಅಧಿಕ ಬಿಷಪರು, 500 ಕ್ಕೂ ಅಧಿಕ ಧರ್ಮಗುರುಗಳು ಹಾಗೂ ಮಂಗಳೂರು ಧರ್ಮಪ್ರಾಂತ್ಯದ ಕ್ರೈಸ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಮಂಗಳೂರಿನ ನಿರ್ಗಮಿತ ಬಿಷಪ್ ರೆ. ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಬೆಂಗಳೂರಿನ ಆರ್ಚ್ ಬಿಷಪ್ ರೆ. ಡಾ. ಪೀಟರ್ ಮಚದೋ ಮತ್ತು ಉಡುಪಿಯ ಬಿಷಪ್ ರೆ.ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರ ಜೊತೆಗೂಡಿ ನೂತನ ಬಿಷಪರ ನೇಮಕದ ಧಾರ್ಮಿಕ ಕಾರ್ಯಕ್ರಮವನ್ನು ಮಾಡಿದರು.

ಜುಲೈ ಮೂರರಂದು ಪೋಪ್ ಪ್ರಾನ್ಸಿಸ್ ಅವರು ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರನ್ನು ಮಂಗಳೂರು ಧರ್ಮಪ್ರಾಂತದ ನೂತನ ಧರ್ಮಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಇದರಂತೆ ಇಂದು ಧಾರ್ಮಿಕ ಕಾರ್ಯಕ್ರಮದ ಮೂಲಕ ನೂತನ ಬಿಷಪ್ ದೀಕ್ಷಾ ವಿಧಿ ಸ್ವೀಕರಿಸಿದ್ದಾರೆ.

ಕಾರ್ಯಕ್ರಮದಲ್ಲಿ ವಿದೇಶಿಯರು ಕೂಡ ಪಾಲ್ಗೊಂಡಿದ್ದರು. ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್, ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಮಾಜಿ ಶಾಸಕ ಜೆ ಆರ್ ಲೋಬೋ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

bishop-2

bishop-3

bishop-4

bishop-5

bishop-6

bishop-7

bishop-8

bishop-9

bishop-10

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English