- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಭೀಕರ ಅಪಘಾತ: ತಾಯಿ-ಮಗಳು ಸೇರಿ ಐವರು ಸ್ಥಳದಲ್ಲೇ ಸಾವು

honnavara accident1 [1]ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟ್ಯಾಂಕರ್ ಹಾಗೂ ಟೆಂಪೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲಿಯೇ ಮೃತಪಟ್ಟು 7 ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಮೃತಪಟ್ಟವರನ್ನು ನಾಗರಾಜ ನಾಯ್ಕ (28), ಟೆಂಪೋ ಚಾಲಕ ಕಮಲಾಕರ ಭಂಡಾರಿ(ಬಾಬು)(35), ಮೋಹನ ಮೇಸ್ತಾ(50), ಸುಮತಿ ಮಡಿವಾಳ(32) ಹಾಗೂ ಆಕೆಯ ಮಗಳು ಸಿಂಚನಾ ಮಡಿವಾಳ(6) ಎಂದು ಗುರುತಿಸಲಾಗಿದೆ.

ಹೊನ್ನಾವರದಿಂದ ಕಾರವಾರದೆಡೆ ಚಲಿಸುತ್ತಿದ್ದ ಟ್ಯಾಂಕರ್ ಹಾಗೂ ಕುಮಟಾದಿಂದ ಪ್ರಯಾಣಿಕರನ್ನು ಹೊತ್ತು ಹೊನ್ನಾವರಕ್ಕೆ ಸಾಗುತ್ತಿದ್ದ ಟೆಂಪೋ ಹಾಗೂ ನಡುವೆ ಕರ್ಕಿಮಠದ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

honnavara accident1 [2]ಅಪಘಾತದ ತೀವೃತೆಗೆ ಟೆಂಪೋ ದಲ್ಲಿದ್ದ ತಾಯಿ ಮಗಳು ಸೇರಿ ಮೂವರು ಪ್ರಯಾಣಿರು ಹಾಗೂ ಎರಡೂ ವಾಹನಗಳ ಚಾಲಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಟೆಂಪೋದಲ್ಲಿದ್ದ ಸುಮಾರು 15 ಮಂದಿಗೆ ಗಾಯವಾಗಿದ್ದು ಇವರಲ್ಲಿ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಹೊನ್ನಾವರ ತಾಲೂಕಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

honnavara accident1 [3]