- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ನರೇಂದ್ರ ಮೋದಿಯವರಿಗೆ ಇಂದು 68ನೇ ಹುಟ್ಟು ಹಬ್ಬದ ಸಂಭ್ರಮ

narendra-modi [1]ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. 68ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ ಅವರಿಗೆ ದೇಶದೆಲ್ಲೆಡೆಯಿಂದ ಶುಭಾಶಯಗಳ ಸುರಿಮಳೆಯಾಗುತ್ತಿದೆ.

ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ರಾಜಕೀಯ ಮುಖಂಡರು, ಗಣ್ಯರು ಸೋಶಿಯಲ್ ಮೀಡಿಯಾಗಳ ಮೂಲಕ ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ತಾವು ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಇಲ್ಲಿ ಶಾಲಾ ಮಕ್ಕಳೊಂದಿಗೆ ಒಂದು ದಿನವನ್ನು ಪ್ರಧಾನಿ ಕಳೆಯಲಿದ್ದಾರೆ.

ಕೆಲ ಅಧಿಕೃತ ಮಾಹಿತಿಗಳ ಪ್ರಕಾರ ಪ್ರಧಾನಿ ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡಲಿರುವ ಪ್ರಧಾನಿ ನಂತರ ಶಾಲಾ ಮಕ್ಕಳ ಜೊತೆಗೂಡಿ ತಮ್ಮದೇ ಜೀವನದಿಂದ ಸ್ಪೂರ್ತಿ ಪಡೆದು ನಿರ್ಮಿತವಾದ ಚಿತ್ರ ‘ಚಲೋ ಜೀತೆ ಹೈ’ ಸಿನಿಮಾವನ್ನು ವೀಕ್ಷಿಸಲಿದ್ದಾರೆ. ಇನ್ನು ಕಳೆದ ಬಾರಿ ಮೋದಿ ತಮ್ಮ ಹುಟ್ಟುಹಬ್ಬದಂದು ಗುಜರಾತ್ನಲ್ಲಿರುವ ತಮ್ಮ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.