ಮಂಗಳೂರು : ಗೋವನಿತಾಶ್ರಯ ಟ್ರಸ್ಟ್ ಮಂಗಳೂರು ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ಸಂಜೆ ಗೋಧೂಳಿ ಮಹೂರ್ತದಲ್ಲಿ ಮೂರು ದಿನಗಳ ‘ಗೋಮಂಡಲ-ಗೋಪೂಜಾ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು.
ವಜ್ರದೇಹಿ ಸಂಸ್ಥಾನದ ಶ್ರೀ ರಾಜಶೇಖರಾನಂದಜೀ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಕೊಲ್ಯ ಶ್ರೀ ರಮಾನಂದ ಸ್ವಾಮೀಜಿ ಅವರು ಗೋಮಾತೆಯ ರಕ್ಷಣೆಗೆ ಎಲ್ಲರೂ ಬದ್ಧರಾಗೋಣ ಎಂದು ಕರೆ ನೀಡಿದರು.
ಸಮಾರಂಭದ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲು ರಾಜ್ಯ ಸರಕಾರ ರೂಪಿಸಿರುವ ಗೋಹತ್ಯೆ ನಿಷೇಧ ಕಾಯ್ದೆಗೆ ಅಂಗೀಕಾರ ನೀಡುವಂತೆಅವರು ರಾಷ್ಟ್ರಪತಿಯವರನ್ನು ಮನವಿ ಮಾಡಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕೆಎಂಎಫ್ ಅಧ್ಯಕ್ಷ ರವಿರಾಜ ಹೆಗ್ಡೆ ಮುಖ್ಯ ಅತಿಥಿಯಾಗಿದ್ದರು.
ಟ್ರಸ್ಟ್‌ನ ಗೌರವಾಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್ ಸ್ವಾಗತಿಸಿದರು. ಪ್ರ. ಕಾರ್ಯದರ್ಶಿ ಡಾ| ಪಿ. ಅನಂತಕೃಷ್ಣ ಭಟ್ ಪ್ರಾಸ್ತಾವಿಕ ಭಾಷಣ ಮಾಡಿದರು .ಟ್ರಸ್ಟಿ ಮನೋಹರ ತುಳಜಾರಾಂ ವಂದಿಸಿದರು. ದಯಾನಂದ ಕಟೀಲು ಕಾರ್ಯಕ್ರಮ ನಿರ್ವಹಿಸಿದರು.
ಟ್ರಸ್ಟ್‌ನ ಕಾರ್ಯಾಧ್ಯಕ್ಷ ಹಿತೇಂದ್ರ ಕೊಠಾರಿ, ಟ್ರಸ್ಟಿ ಎಲ್. ಶ್ರೀಧರ ಭಟ್, ಸದಸ್ಯರಾದ ರಘುರಾಮ ಕಾಜವ, ಗಣೇಶ್ ಭಟ್ ಮುಂತಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English