ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೇಯೇ ಇಲ್ಲ: ಟಿ.ಡಿ.ರಾಜೇಗೌಡ

4:40 PM, Tuesday, September 18th, 2018
Share
1 Star2 Stars3 Stars4 Stars5 Stars
(No Ratings Yet)
Loading...

t-d-rajegoudaಚಿಕ್ಕಮಗಳೂರು: ನನಗೆ ಕೆಲವು ಬಿಜೆಪಿ ಮುಖಂಡರು ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದರು. ಆದರೆ ಅದನ್ನು ನಾನು ಈಗಾಗಲೇ ತಿರಸ್ಕಾರ ಮಾಡಿದ್ದೇನೆ ಎಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಹೇಳಿದ್ದಾರೆ.

ರಾಜ್ಯದಲ್ಲಿ ಅಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೇಯೇ ಇಲ್ಲ. ನಾನು ತತ್ವ ಸಿದ್ಧಾಂತಗಳ ಮೇಲೆ ರಾಜಕೀಯಕ್ಕೆ ಬಂದವನು. ಕೆಲವು ಮುಖಂಡರು ಬಿಜೆಪಿಗೆ ಬರುವಂತೆ ಭಾರಿ ಮೊತ್ತದ ಹಣ ಹಾಗೂ ಸಚಿವ ಸ್ಥಾನ ನೀಡೋದಾಗಿ ಆಫರ್ ನೀಡಿದ್ದರು. ಬಿಜೆಪಿಯವರು ನನ್ನನ್ನು ಕೂಡ ಅಪರೇಷನ್ ಕಮಲಕ್ಕೆ ಒಳಪಡಿಸುವ ಪ್ರಯತ್ನ ಮಾಡಿದ್ದಾರೆ ಎಂದರು.

ನನಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಜೆಪಿಯವರು ನೀಡಿದ್ರೂ ಅಥವಾ ಬೇರಾವುದೇ ಸ್ಥಾನಮಾನ ನೀಡಿದ್ರು ಆಪರೇಷನ್ ಕಮಲಕ್ಕೆ ನಾನು ಒಳಗಾಗುವುದಿಲ್ಲ. ನಾನು ಕಾಂಗ್ರೆಸ್ ಪಕ್ಷ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ನಲ್ಲಿಯೇ ಇರುತ್ತೇನೆ ಎಂದು ಶೃಂಗೇರಿಯಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English