ಡ್ರಿಪ್ಸ್​ ಹಾಕಿಕೊಂಡೇ ಸಿಎಂ ಜೊತೆಗೆ ಚರ್ಚೆ ನಡೆಸಿದ ಡಿ.ಕೆ. ಶಿವಕುಮಾರ್​

3:25 PM, Thursday, September 20th, 2018
Share
1 Star2 Stars3 Stars4 Stars5 Stars
(No Ratings Yet)
Loading...

d-k-shivkumarಬೆಂಗಳೂರು: ಅನಾರೋಗ್ಯದಿಂದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಇಂದು ಆಸ್ಪತ್ರೆಗೆ ಭೇಟಿ ಮಾಡಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಶಿವಕುಮಾರ್ ಅವರ ಆರೋಗ್ಯವನ್ನು ವಿಚಾರಿಸಿದ ಸಿಎಂ ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಶಿವಕುಮಾರ್ ಡ್ರಿಪ್ಸ್ ಹಾಕಿಕೊಂಡೆ ಸಿಎಂ ಜೊತೆ ಮಾತನಾಡಿದ್ದಾರೆ.

ಸ್ವಲ್ಪ ಯಾಮಾರಿದ್ದರೂ ಮೈತ್ರಿ ಸರ್ಕಾರ ಪತನವಾಗುತ್ತಿತ್ತು. ಈಗಲೂ ಸರ್ಕಾರವನ್ನು ಬೀಳಿಸಲು ಬಿಜೆಪಿ ನಿರಂತರವಾಗಿ ಪ್ರಯತ್ನ ನಡೆಸುತ್ತಿದೆ. ನಮ್ಮ ಸರ್ಕಾರದ ಹಲವು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಯಾವುದೇ ಕಾರಣಕ್ಕೂ ನಾವು ಯಾಮಾರಬಾರದೆಂದು ಸಿಎಂ ಡಿಕೆಶಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ವೇಳೆ ಜಾರಕಿಹೊಳಿ ಸಹೋದರರ ಕುರಿತು ಚರ್ಚೆ ನಡೆಸಿದ್ದು, ನಮ್ಮ ಶಾಸಕರನ್ನು ನಾವು ಹಿಡಿದಿಟ್ಟುಕೊಳ್ಳಬೇಕು. ನಿನ್ನೆ ರಮೇಶ್ ಜಾರಕಿಹೊಳಿರವರು ನನ್ನನ್ನು ಭೇಟಿಯಾಗಲು ಬಂದಿದ್ದಾಗ ಎಲ್ಲಿಗೂ ಹೋಗಲ್ಲ ಪಕ್ಷ ಬಿಡುವುದಿಲ್ಲ ಎಂದಿದ್ದಾರೆ. ಆದರೂ ನಾವು ಎಚ್ಚರಿಕೆಯಿಂದ ಇರಬೇಕೆಂದು ಡಿಕೆಶಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಜಾರಿ ನಿರ್ದೇಶನಾಲಯ (ಇ.ಡಿ)ದಾಖಲಿಸಿರುವ ಎಫ್ಐಆರ್ ಕುರಿತು ಸಿಎಂ ಹಾಗೂ ಡಿಕೆಶಿ ಚರ್ಚೆ ನಡೆಸಿದ್ದು, ಈ ವೇಳೆ ವಿಚಾರಣೆ ಹೆಸರಲ್ಲಿ ಇ.ಡಿ.ಯವರು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆಂದು ಶಿವಕುಮಾರ್ ತಿಳಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಡಿಕೆ, ನೀವು ಯಾವುದಕ್ಕೂ ಹೆದರಬೇಡಿ. ನಿಮ್ಮ ಜೊತೆ ನಾವಿದ್ದೇವೆ. ಕಾನೂನು ಹೋರಾಟವನ್ನು ಮತ್ತಷ್ಟು ಚುರುಕುಗೊಳಿಸಿ, ಎಲ್ಲವೂ ಸರಿಯಾಗುತ್ತದೆ ಎಂದು ಸಿಎಂ ಅಭಯ ನೀಡಿದ್ದಾರೆ ಎಂದು ತಿಳಿದುಬಂದಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English