ಮಂಗಳೂರು: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ 15 ನೇ ವರ್ಷದ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ಆಳ್ವಾಸ್ ನುಡಿಸಿರಿಯ ಸರ್ವಾಧ್ಯಕ್ಷರಾಗಿ ಸಾಹಿತಿ ಡಾ. ಮಲ್ಲಿಕಾ ಘಂಟಿ ಮತ್ತು ಉದ್ಘಾಟಕರಾಗಿ ಡಾ. ಶೆಟ್ಟರ್ ಅವರನ್ನು ಆಯ್ಕೆ ಮಾಡಲಾಗಿದೆ
ಈ ಬಾರಿ ‘ಕರ್ನಾಟಕ ದರ್ಶನ-ಬಹುರೂಪಿ ಆಯಾಮಗಳು’ ಎಂಬ ಪ್ರಧಾನ ಪರಿಕಲ್ಪನೆಯೊಂದಿಗೆ ಆಳ್ವಾಸ್ ನುಡಿಸಿರಿ-2018 ಸಮ್ಮೇಳನವು ನವೆಂಬರ್ 16, 17 ಮತ್ತು 18ರಂದು ಮೂಡುಬಿದಿರೆಯ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ ಆಳ್ವಾ ಆವರಣದಲ್ಲಿರುವ ಕವಿ ರತ್ನಾಕರವರ್ಣಿ ವೇದಿಕೆ, ಆಳ್ವಾಸ್ ನುಡಿಸಿರಿ ಸಭಾಂಗಣದಲ್ಲಿ ಜರುಗಲಿದೆ.
Click this button or press Ctrl+G to toggle between Kannada and English