ಮಂಗಳೂರು: ತುಳುನಾಡು ರಕ್ಷಣಾ ವೇದಿಕೆಯ ದಶ ಸಂಭ್ರಮದ ಅಂಗವಾಗಿ ಆಯೋಜಿಸಲಾಗುವ ತೌಳವ ಉಚ್ಚಯ ಕಾರ್ಯಕ್ರಮದ ವಿಜ್ಞಾಪನ ಪತ್ರವನ್ನು ಸೋಮವಾರ ತುಳುಭವನದಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿ ಬಿಡುಗಡೆಗೊಳಿಸಿದರು. ಅವರು ತುಳು ಭಾಷೆ, ಸಂಸ್ಕೃತಿಯ ರಕ್ಷಣೆಗೆ ಪ್ರತಿಯೊಬ್ಬರೂ ಸನ್ನದ್ಧರಾಗಬೇಕು ಎಂದು ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.
ಇಂದಿನ ಬಹುತೇಕ ಯುವ ಪೀಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅನಾವಶ್ಯಕವಾಗಿ ಸಮಯ ವ್ಯರ್ಥ ಮಾಡುತ್ತಿರುವುದು ಆತಂಕಕಾರಿ ವಿಷಯ. ಆಧುನಿಕ ತಂತ್ರಜ್ಞಾನವನ್ನು ಅವಶ್ಯಕತೆ ಇದ್ದಷ್ಟೇ ಬಳಸಿ ನಾಡಿನ ಸಂಸ್ಕೃತಿಯ ಉಳಿವಿಗಾಗಿ ಸಮಯ ವಿನಿಯೋಗಿಸಬೇಕು ಎಂದರು.
ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ಎ.ಸಿ. ಭಂಡಾರಿ, ಎಚ್. ಎಂ. ಎಸ್. ರಾಜ್ಯಾಧ್ಯಕ್ಷ ಸುರೇಶ ಚಂದ್ರ ಶೆಟ್ಟಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ್, ವಕೀಲ ರಾಘವೇಂದ್ರ ರಾವ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ಎ. ಮೊಹಮ್ಮದ್ ಹನೀಫ್, ಮಲಾರ್ ಜಯರಾಮ್ ರೈ ನಿಟ್ಟೆ ಶಶಿಧರ್ ಶೆಟ್ಟಿ ಆಗಮಿಸಿದ್ದರು.
Click this button or press Ctrl+G to toggle between Kannada and English