ಮಾಜಿ ಸಂಸದೆ ರಮ್ಯಾ ವಿರುದ್ಧ ಎಫ್‍ಐಆರ್ ದಾಖಲು..!

5:25 PM, Wednesday, September 26th, 2018
Share
1 Star2 Stars3 Stars4 Stars5 Stars
(No Ratings Yet)
Loading...

ramyaಉತ್ತರ ಪ್ರದೇಶ: ಮಾಜಿ ಸಂಸದೆ, ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ ರಮ್ಯಾ (ದಿವ್ಯಾ ಸ್ಪಂದನ) ಮತ್ತು ವಿವಾದಗಳಿಗೆ ಬಿಡದ ನಂಟು. ಸದಾ ಒಂದಲ್ಲ ಒಂದು ವಿವಾದದಲ್ಲಿ ಸಿಲುಕಿಕೊಂಡಿರುತ್ತಾರೆ. ಯುಪಿಯಲ್ಲಿ ಈಗ ಮತ್ತೊಂದು ಪ್ರಕರಣದಡಿ ರಮ್ಯಾ ವಿರುದ್ಧ ದೂರು ದಾಖಲಾಗಿದೆ.

ರಫೇಲ್‌ ಒಪ್ಪಂದ ವಿವಾದಕ್ಕೆ ಸಂಬಂಧಿಸಿದಂತೆ ರಮ್ಯಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಮಾಡಿದ ಟ್ವೀಟ್‌ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ರಫೇಲ್ ಒಪ್ಪಂದ ಕುರಿತು ರಮ್ಯಾ ಸೆಪ್ಟೆಂಬರ್ 24 ರಂದು ಮೋದಿ ಅವರ ಮೇಣದ ಪ್ರತಿಮೆಯ ಫೋಟೋ ಟ್ವೀಟ್ ಮಾಡಿದ್ದರು. ಈ ಫೋಟೋದಲ್ಲಿ ಮೋದಿ ಸ್ವತಃ ತಮ್ಮ ಪ್ರತಿಮೆ ಮೇಲೆ ಕಳ್ಳ ಎಂದು ಬರೆಯುವಂತೆ ಚಿತ್ರಿಸಲಾಗಿದೆ. ಈ ಫೋಟೋಗೆ ಕಳ್ಳ ಪ್ರಧಾನಿ ಸುಮ್ಮನಿದ್ದಾರೆ (#ChorPMChupHai) ಎಂಬ ಹ್ಯಾಷ್ ಟ್ಯಾಗ ಬಳಸಿ ರಮ್ಯಾ ಟ್ವೀಟ್ ಮಾಡಿದ್ದರು.

ರಮ್ಯಾ ಮಾಡಿದ ಟ್ವಿಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದ್ವೇಷ ಕಾರುವ ಅಂಶವಿದೆ. ಹೀಗಾಗಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಿಜ್ವಾನ್ ಅಹ್ಮದ್ ದೂರು ನೀಡಿದ್ದರು.

ಗೋಮತಿನಗರ ಪೊಲೀಸ್‌ ಠಾಣೆಯಲ್ಲಿ ಸೆಕ್ಷನ್‌- 67 ಮಾಹಿತಿ ತಂತ್ರಜ್ಞಾನ ತಿದ್ದುಪಡಿ ಕಾಯ್ದೆ, 2008 ಮತ್ತು ಸೆಕ್ಷನ್‌ 124ಎ ಅಡಿ ದೂರು ದಾಖಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English