ಸುಳ್ಯದ ಖಾಸಗಿ ಕಾಲೇಜಿನ ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!
12:36 PM, Thursday, September 27th, 2018
Loading...
ಮಂಗಳೂರು: ಸುಳ್ಯದ ಖಾಸಗಿ ಕಾಲೇಜಿನ ದಂತ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದಂತ ವೈದ್ಯಕೀಯ ಪ್ರಥಮ ವರ್ಷದ ವಿದ್ಯಾರ್ಥಿನಿ ಕೇರಳದ ನೇಹ ಎ. ಥಾಮ್ಸನ್ ತಮ್ಮ ಪಿಜಿ ಕೊಠಡಿಯಲ್ಲಿ ಬುಧವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.