ಯುನೈಟೆಡ್ ನೆಷನ್ಸ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಅವರು ವಿಶ್ವಸಂಸ್ಥೆಯ ಚಾಂಪಿಯನ್ ಆಪ್ ದಿ ಅರ್ಥ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
2022 ರೊಳಗೆ ಭಾರತವನ್ನು ಪ್ಲಾಸ್ಟಿಕ್ ಮುಕ್ತ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ನರೇಂದ್ರಮೋದಿ ಅವರ ಸಂಕಲ್ಪ ಹಾಗೂ ಪರಿಸರ ರಕ್ಷಣೆ ನಿಟ್ಟಿನಲ್ಲಿ ಮ್ಯಾಕ್ರೋನ್ ಅವರ ಕಾರ್ಯವನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ವಿಶ್ವದ ಅತ್ಯಂತ ದೊಡ್ಡ ಪರಿಸರ ಪ್ರಶಸ್ತಿಯಾಗಿದ್ದು, ಅಂತಾರಾಷ್ಟ್ರೀಯ ಸೌರಶಕ್ತಿ ರಾಷ್ಟ್ರಗಳ ಮೈತ್ರಿಯಲ್ಲಿ ಮಾಡಿದ ಅನುಪಮ ಕೆಲಸ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಹೊಸ ಕ್ಷೇತ್ರಗಳ ಪ್ರೋತ್ಸಾಹದ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಟ್ವೀಟ್ ಸಹ ಮಾಡಿದ್ದಾರೆ.
Click this button or press Ctrl+G to toggle between Kannada and English