ಮಂಗಳೂರು: ಸಾರ್ವಜನಿಕರಿಗೆ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಿಷೇಧಿತ ಮಾದಕ ವಸ್ತುವನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮಾರಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಮಂಗಳೂರಿನ ಕಾಟಿಪಳ್ಳದ ಮಹಮ್ಮದ್ ಶಫಿ (32) ಬಂಧಿತ ಆರೋಪಿ. ಆರೋಪಿಯಿಂದ 90 ಗ್ರಾಂ ತೂಕದ ರೂ. 3,15,000 ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತನಿಂದ ಮೊಬೈಲ್ ಫೋನ್, ಡಿಜಿಟಲ್ ತೂಕದ ಯಂತ್ರ, ಹಾಗೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ನಗರದಲ್ಲಿ ಹಲವು ವ್ಯಕ್ತಿಗಳಿಗೆ ಈ ಮಾದಕ ವಸ್ತುವನ್ನು ಅನ್ನು ಮಾರಿರುವ ಬಗ್ಗೆ ತಿಳಿದುಬಂದಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಹಾಗೂ ವಶಪಡಿಸಿಕೊಂಡ ಸೊತ್ತುಗಳನ್ನು ಮುಂದಿನ ಕ್ರಮಕ್ಕಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
Click this button or press Ctrl+G to toggle between Kannada and English