ಬೆಂಗಳೂರು: ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನಿರಾಕರಿಸುವುದರ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ದೊರೆತ ಹಿನ್ನೆಲೆ ಸಚಿವೆ ಜಯಮಾಲ ಪ್ರತಿಕ್ರಿಯೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ನಿಂದ ಬಂದ ತೀರ್ಪು ಸ್ವಾಗತಾರ್ಹವಾಗಿದ್ದು, ಹೆಣ್ಣು ಕುಲಕ್ಕೆ ಸುಪ್ರೀಂ ಕೋರ್ಟ್ ನ್ಯಾಯ ನೀಡಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ನಾನು ಸ್ಮರಿಸುತ್ತಿದ್ದೇನೆ. ಮಹಿಳೆಯರಿಗೆ ಸಾಮಾಜಿಕ ನ್ಯಾಯದ ಹೋರಾಟಕ್ಕೆ ಇಂದು ಫಲ ಸಿಕ್ಕಿದೆ ಎಂದರು.
ಇನ್ನು ಈ ಬಾರಿ ಮಹಿಳಾ ಸಮುದಾಯಕ್ಕೆ ನ್ಯಾಯ ಒದಗಿಸಿಕೊಟ್ಟಿದ್ದಾರೆ. ಇಲ್ಲಿ ಬಂದಿರುವ ಪಕ್ಷದ ಎಲ್ಲ ನಾಯಕರಿಗೂ, ಮುಖಂಡರಿಗೂ ಸದಸ್ಯರಿಗೂ ಧನ್ಯವಾದಗಳು ಎಂದು ಹೇಳಿದರು.
Click this button or press Ctrl+G to toggle between Kannada and English