ಪೊಲೀಸ್​​ ಇಲಾಖೆ ವತಿಯಿಂದ ಮಾದಕ ದ್ರವ್ಯ ವ್ಯಸನ ವಿರೋಧಿ ಅಭಿಯಾನ

3:44 PM, Friday, September 28th, 2018
Share
1 Star2 Stars3 Stars4 Stars5 Stars
(No Ratings Yet)
Loading...

parameshwarಬೆಂಗಳೂರು: ಡ್ರಗ್ಸ್ ಚಟಕ್ಕೆ ಬಿದ್ದ ಅದೆಷ್ಟೋ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಜೀವಕ್ಕೆ ಮಾರಕವಾಗಿರುವ ಡ್ರಗ್ಸ್ ತ್ಯಜಿಸುವಂತೆ ಯುವ ಪಿಳಿಗೆಯ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಬೆಂಗಳೂರು ನಗರ ಪೊಲೀಸ್ ಇಲಾಖೆ ವೈಟ್ ಫೀಲ್ಡ್ ವಿಭಾಗದ ವತಿಯಿಂದ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಡ್ರಗ್ಸ್ ತಡೆಗೆ ಮುಂದಾಗಿದ್ದಾರೆ.

ಹೀಗೆ ಒಂದೆಡೆ ಸೇ ನೋ ಟು ಡ್ರಗ್ಸ್ ಎಂಬ ಬಿತ್ತಿ ಪತ್ರ ಹಿಡುದು ಜನರು ಕೂಗುತ್ತಿದ್ದರು. ಮತ್ತೊಂದೆಡೆ ಡ್ರಗ್ಸ್ ನಿರ್ಮೂಲನೆ ಮಾಡುವುದಾಗಿ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಕರು ಪ್ರತಿಜ್ಞಾ ವಿಧಿ ಸ್ವೀಕರಿಸುತ್ತಿದ್ದರು.

ಬೆಂಗಳೂರಿನ ವೈಟ್ ಫೀಲ್ಡ್ನ ಫಿನಿಕ್ಸ್ ಮಾಲ್ನಲ್ಲಿ ಡ್ರಗ್ಸ್ ನಿರ್ಮೂಲನೆಯ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಬೆಂಗಳೂರು ನಗರ ಪೋಲಿಸ್ ಇಲಾಖೆ ವತಿಯಿಂದ ಡ್ರಗ್ಸ್ NO ಹೇಳಿ, ಬದುಕಿಗೆ YES ಹೇಳಿ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಹಾಗೂ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಸಾವಿರಕ್ಕೂ ಅಧಿಕ ಸ್ವಯಂ ಸೇವಕರು ಭಾಗವಹಿಸಿದ್ದು, ಇವರೊಟ್ಟಿಗೆ ಗಣ್ಯರು, ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಡ್ರಗ್ಸ್ ನಿರ್ಮೂಲನೆ ಮಾಡುವ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ರಿಕೆಟಿಗ ಜಾವಗಲ್ ಶ್ರೀನಾಥ್, ಮಾದಕ ವ್ಯಸನಿಗಳು ಚಟಗಳಿಂದ ದೂರವಿದ್ದು ಕುಟುಂಬದ ಜೊತೆ ಸಹಬಾಳ್ವೆ ನಡೆಸಬೇಕೆಂದು ತಿಳಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಡ್ರಗ್ಸ್ ಸೇವನೆಯಿಂದ ಉಂಟಾಗುವ ತೊಂದರೆಗಳ ಕಿರುಚಿತ್ರ, ದೇಹದಾರ್ಢ್ಯ ಪ್ರದರ್ಶನ, ಕಲರಿಯಪಟ್ಟು ಸಮರ ಕಲೆ(ಮಾರ್ಷಲ್ ಆರ್ಟ್ಸ್) ಪ್ರದರ್ಶಿಸಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಅರವಿಂದ ಲಿಂಬಾವಳಿ, ಪೊಲೀಸ್ ಇಲಾಖೆಯಿಂದ ಉತ್ತಮ ಕಾರ್ಯಕ್ರಮ ಆಯೋಜಿಸಿದ್ದು, ಬೆಂಗಳೂರು ನಗರವನ್ನು ಪಂಜಾಬ್ ಮಾದರಿ ಆಗಲು ಬಿಡುವುದಿಲ್ಲವೆಂದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English