ಮಂಗಳೂರು: ಬಸ್ಗಳು ಸೇರಿದಂತೆ ಪ್ರಯಾಣಿಕರ ವಾಹನಗಳಿಗೆ ಶಿರಾಡಿ ಘಾಟ್ನಲ್ಲಿ ಸಂಚರಿಸಲು ಬುಧವಾರದಿಂದ ಅನುಮತಿ ನೀಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿದ ಬಳಿಕ ವಾಹನ ಸಂಚಾರ ನಿಷೇಧಿಸಲಾಗಿದ್ದು ಬುಧವಾರದಿಂದ ಪ್ರಯಾಣಿಕ ವಾಹನಗಳಿಗೆ ಸಂಚರಿಸಲು ಅನುವು ಮಾಡಲಾಗುತ್ತದೆ. ಎಲ್ಲಾ ರೀತಿಯ ಬಸ್ಗಳ ಪ್ರಯಾಣಕ್ಕೂ ಅನುಮತಿ ನೀಡಲಾಗುವುದು. ಆದರೆ ಸರಕುಗಳನ್ನು ಸಾಗಿಸುವ ವಾಹನಗಳಿಗೆ ಅನುಮತಿ ಇಲ್ಲ. ಮುಂದಿನ ವಾರದಲ್ಲಿ ಪರಿಶೀಲನೆ ಮಾಡಿದ ಬಳಿಕ ಮತ್ತೆ ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English