ಉಜಿರೆ: ಮನಸ್ಸಿನ ನಿಯಂತ್ರಣದೊಂದಿಗೆ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಬೇಕು. ನಾಯಕತ್ವ ಗುಣದೊಂದಿಗೆ ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಶನಿವಾರ ಧರ್ಮಸ್ಥಳದಲ್ಲಿ ಭಜನಾ ಕಮ್ಮಟದ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಭಜನೆಯಲ್ಲಿ ಸಾಹಿತ್ಯವಿದೆ. ಸಾಹಿತ್ಯದಲ್ಲಿ ಸಾರ್ಥಕ ಬದುಕಿಗೆ ಬೇಕಾದ ಸಂದೇಶವಿದೆ. ಹಾಡುಗಳ ಅರ್ಥವನ್ನು ತಿಳಿದು ಹಾಡಬೇಕು. ನಿಜ ಜೀವನದಲ್ಲಿಯೂ ಅದನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಯಾವುದೇ ಸಮಸ್ಯೆ ಬಂದಾಗ ಅದನ್ನು ಆತ್ಮವಿಶ್ವಾಸದಿಂದ ಎದುರಿಸುವ ಶಕ್ತಿ-ತಾಳ್ಮೆಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
Click this button or press Ctrl+G to toggle between Kannada and English