- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಹುಡುಗಿ ವೇಷ ಹಾಕಿಸಿ ಹಣ ಸುಲಿಗೆ ಮಾಡುತ್ತಿದ್ದ ಇಬ್ಬರ ಬಂಧನ

urva-store [1]ಮಂಗಳೂರು: ಉರ್ವ ಪೊಲೀಸ್ ಠಾಣಾ ಪ್ರಕರಣವೊಂದರಲ್ಲಿ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉರ್ವ ಪೊಲೀಸ್ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಯವರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿರುತ್ತಾರೆ.

ಪ್ರಕರಣದ ಫಿರ್ಯಾಧಿದಾರರನ್ನು ಬೆಂಗಳೂರು ಮೂಲದ ಆರಾಧ್ಯ ಎಂಬ ಹೆಂಗಸಿನ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡಿರುತ್ತಾರೆ. ಫಿರ್ಯಾಧಿದಾರರು ಆರೋಪಿಯ ಬೇಡಿಕೆಯಂತೆ ತಮ್ಮ ಭಾವಚಿತ್ರವನ್ನು ಕಳುಹಿಸಿಕೊಟ್ಟಿದ್ದು, ಈ ಭಾವಚಿತ್ರವನ್ನು ಪಡೆದುಕೊಂಡ ಆರೋಪಿ ಪೊಲೀಸರಿಗೆ ದೂರು ನೀಡಿ ಜೈಲಿಗೆ ಕಳುಹಿಸುವುದಾಗಿ ಬ್ಲಾಕ್ ಮೇಲ್ ಮಾಡಿ ಫಿರ್ಯಾಧಿದಾರರಿಂದ ರೂ 65.000/- ಹಣವನ್ನು ಬೆಂಗಳೂರಿನ ಯಶವಂತಪುರದಲ್ಲಿ ಪಡೆದುಕೊಂಡಿರುತ್ತಾರೆ. ನಂತರದಲ್ಲಿ ಪದೇ ಪದೇ ಫೋನ್ ಮಾಡಿ ಹೆಚ್ಚಿನ ಹಣಕ್ಕಾಗಿ ಪೀಡಿಸುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುವ ಸಮಯ ಆರೋಪಿಗಳು ಫಿರ್ಯಾಧಿದಾರರಿಗೆ ಹಿರಿಯ ಪೊಲೀಸ್ ಅಧಿಕಾರಿಗಳ ಹಾಗೂ ರಾಜಕಾರಣಿಗಳ ಸೋಗಿನಲ್ಲಿ ಕರೆ ಮಾಡಿ ಹೆದರಿಸಿರುತ್ತಾರೆ.

ಪ್ರಕರಣದ ಆರೋಪಿಗಳನ್ನು ದಿನಾಂಕ 02-10-2018 ರಂದು ಖಚಿತ ಮಾಹಿತಿ ಆಧಾರದ ಮೇಲೆ ಬೆಂಗಳೂರಿನ ಕೊಲಂಬಿಯಾ ಆಸ್ಪತ್ರೆ ಬಳಿ 1) ಆದಿತ್ಯ @ ಅಶ್ವಿನಿ, ಪ್ರಾಯ 19, ತಂದೆ- ವೆಂಕಟೇಶ್ @ ರಾಜು , ವಾಸ- ನಂಬ್ರ 16/1, 4ನೇ ಕ್ರಾಸ್, ಸುಭೇದಾರ ಪಾಳ್ಯ, ತ್ರಿವೇಣಿ ಕ್ರಾಸ್, ಯಶವಂತಪುರ, ಬೆಂಗಳೂರು, 2) ಅರುಣ್ ಹೆಚ್.ಎಸ್, ಪ್ರಾಯ 27, ತಂದೆ- ಶಿವ ಚೌಡೇಗೌಡ, ವಾಸ-ಹಳೇ ಸೆಂಟ್ ಮೈಕೆಲ್ ಶಾಲೆ ಎದುರು, ಬಸವೇಶ್ವರ ನಗರ, 1 ನೇ ಮಹಡಿ, ಕನಕಪುರ, ರಾಮನಗರ ಜಿಲ್ಲೆ ಎಂಬ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿರುತ್ತದೆ. ಈ ಪ್ರಕರಣದ ಮುಖ್ಯ ಆರೋಪಿ ಆರಾಧ್ಯ ಎಂಬ ಹೆಸರಿನಲ್ಲಿ ಪರಿಚಯ ಮಾಡಿಕೊಂಡಿದ್ದಾಕೆ ಪುರುಷ ವ್ಯಕ್ತಿ ಎಂಬುದು ದಸ್ತಗಿರಿ ಸಮಯ ತಿಳಿದು ಬಂದಿದ್ದು, ಹೆಂಗಸಿನ ವೇಷ ಧರಿಸಿ ಫಿರ್ಯಾಧಿದಾರರನ್ನು ನಂಬಿಸಿ ಬ್ಲಾಕ್ ಮೇಲ್ ಮಾಡಿರುತ್ತಾರೆ.

ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಟಿ. ಆರ್ ಸುರೇಶ್, ಐ.ಪಿ.ಎಸ್, ಮಾನ್ಯ ಪೊಲೀಸ್ ಉಪ ಆಯುಕ್ತರಾದ (ಅಪರಾಧ& ಸಂಚಾರ) ಶ್ರೀಮತಿ ಉಮಾಪ್ರಶಾಂತ್, ಹಾಗೂ ಕೇಂದ್ರ ಉಪವಿಭಾಗದ ಎ.ಸಿ.ಪಿ ರವರಾದ ಶ್ರೀ ಉದಯ ನಾಯಕ್ ರವರ ಮಾರ್ಗದರ್ಶನದಲ್ಲಿ, ಉರ್ವ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.