ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣನ ಅಬ್ಬರ ಶುರುವಾಗಿದೆ. ಇನ್ನೂ ಒಂದು ವಾರ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಯಶವಂತಪುರ, ಜಯನಗರ, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುತ್ತಿದೆ. ಚೆನ್ನೈ ಕರಾವಳಿ ತೀರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ಮಳೆಯಾಗುತ್ತಿದೆ. ಮುಂದಿನ ವಾರವೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತ ಉಂಟಾಗಲಿದ್ದು, ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಅವರು ಮಾಹಿತಿ ನೀಡಿದ್ದಾರೆ.
ಇನ್ನು ಈ ಬಾರಿ ಹಿಂಗಾರು ಮಳೆಯ ಅಬ್ಬರ ಕೂಡಾ ಜೋರಾಗಿರಲಿದ್ದು ಈಗಾಗಲೇ ಆಂಧ್ರ ಹಾಗೂ ತಮಿಳುನಾಡಿನಲ್ಲೂ ಆರಂಭವಾಗಿದೆ. ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯ ಪ್ರಮಾಣ ಹೆಚ್ಚಿರಲಿದ್ದು, ಇದೇ ತಿಂಗಳಲ್ಲಿ ನಾಲ್ಕು ದಿನಗಳ ಕಾಲ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ ಎಂದು ಶ್ರೀನಿವಾಸ್ ರೆಡ್ಡಿ ಹೇಳಿದ್ದಾರೆ.
Click this button or press Ctrl+G to toggle between Kannada and English