ಬೆಂಗಳೂರು: ಕೊಡಗು ಪ್ರವಾಹ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಕೇಳಿದ್ದೆ. ರಷ್ಯಾ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ ಸಾಧ್ಯವಾಗಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಭೇಟಿಗೆ ಪ್ರಧಾನಿ ಸೂಚಿಸಿದರು. ಹೀಗಾಗಿ, ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ದೇವೆ. ಸಾಕಷ್ಟು ಪ್ರಮಾಣದಲ್ಲಿ ಪ್ರವಾಹದಿಂದ ಹಾನಿಯಾಗಿದೆ. ಕೇಂದ್ರ ಸರ್ಕಾರದ ತಂಡ ನೀಡಿದ್ದ ವರದಿ ಆಧರಿಸಿ ಪರಿಹಾರ ಕೇಳಿದ್ದೇವೆ ಎಂದರು.
ಉಪ ಮೇಯರ್ ರಮಿಳಾ ಉಮಾಶಂಕರ್ ನಿಧನಕ್ಕೆ ಸಂತಾಪ ಸೂಚಿಸಿದ ಗೌಡರು, ಅವರು ನಮ್ಮ ಪಕ್ಷದ ನಾಯಕಿಯಾಗಿ ಕೆಲಸ ಮಾಡಿದ್ದರು. ಕಳೆದ ವಾರ ಅವರನ್ನು ಉಪ ಮೇಯರ್ ಆಗಿ ಆಯ್ಕೆ ಮಾಡಿದ್ದೆವು. ಅವರ ಅಕಾಲಿಕ ನಿಧನ ಅಘಾತ ತಂದಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕೊಡಲಿ ಎಂದು ಪ್ರಾರ್ಥಿಸಿದರು.
ದೆಹಲಿಯಿಂದ ನೇರವಾಗಿ ಬೆಂಗಳೂರಿಗೆ ತೆರಳುತ್ತೇನೆ. ತಾವರೆಕೆರೆ ಬಳಿ ನಡೆಯುವ ರಮಿಳಾ ಅವರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸುತ್ತೇನೆ ಎಂದರು.
Click this button or press Ctrl+G to toggle between Kannada and English