ಶ್ಯಾಮಶಾಸ್ತ್ರಿ ಆತ್ಮಹತ್ಯೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್​ಗೆ ನ್ಯಾಯಾಲಯದಿಂದ ವಾರಂಟ್

2:25 PM, Saturday, October 6th, 2018
Share
1 Star2 Stars3 Stars4 Stars5 Stars
(No Ratings Yet)
Loading...

kalladkaಪುತ್ತೂರು: 2014 ರಲ್ಲಿ ನಡೆದ ಶ್ಯಾಮಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಬೋನಂತಾಯ ಶಿವಶಂಕರ ಭಟ್ ಅವರಿಗೆ ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.

ಇದೇ ವೇಳೆ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿ, ಅ.31 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ರಾಘವೇಶ್ವರ ಸ್ವಾಮೀಜಿ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದ ಮಹಿಳೆಯ ಪತಿಯ ಸಹೋದರ ಶ್ಯಾಮ್ ಪ್ರಸಾದ್ ಶಾಸ್ತ್ರಿ 2014 ರ ಆ.31ರಂದು ಮಧ್ಯಾಹ್ನ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಬಗ್ಗೆ ಶ್ಯಾಮ ಶಾಸ್ತ್ರಿ ಅವರ ಪತ್ನಿ ನಗರ ಠಾಣೆಗೆ ದೂರು ನೀಡಿ, ಹಲವರ ವಿರುದ್ಧ ಆರೋಪ ಮಾಡಿದ್ದರು. ಬಳಿಕ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲಾಗಿತ್ತು. ಸದ್ಯ ಸಿಐಡಿ ಪೊಲೀಸರು ಅಂತಿಮ ದೋಷಾರೋಪ ಪಟ್ಟಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English