ಮಂಗಳೂರು: ಕಾರ್ಖಾನೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರದ ಗುರುಂಪು ಎಂಬಲ್ಲಿ ನಡೆದಿದೆ.
ದುಗ್ಗಲಡ್ಕದ ನಾಗರಾಜ್ ಕಂದಡ್ಕ (18) ಮೃತ ದುರ್ದೈವಿ. ಎಂಟು ತಿಂಗಳ ಹಿಂದೆ ಈತ ಕಾರ್ಖಾನೆಗೆ ಸೇರಿಕೊಂಡಿದ್ದ. ಕಾರ್ಯನಿರ್ವಹಣೆ ವೇಳೆ ಆಕಸ್ಮಿಕವಾಗಿ ವಿದ್ಯುತ್ ಹರಿವು ಹೆಚ್ಚಾಗಿ ಶಾಕ್ ಹೊಡೆದಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾನೆ.
ಈ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English