ಮಂಗಳೂರು: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಮಂಗಳೂರಿನ ಅಯ್ಯಪ್ಪ ಸೇವಾ ಸಮಿತಿ ಬೃಹತ್ ಹೋರಾಟ ನಡೆಸಲು ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಮಂಗಳವಾರ ಕದ್ರಿ ಮೈದಾನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಸೇರಿ ಸಭೆ ನಡೆಸಲು ತೀರ್ಮಾನಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ತಿನ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದರು.
ಸಭೆಯ ಬಳಿಕ ಭಜನೆಯ ಮೂಲಕ ಶ್ರೀಕ್ಷೇತ್ರ ಕದ್ರಿಗೆ ತೆರಳಿ ಪ್ರಾರ್ಥನೆ ನಡೆಸಲು ಸಮಿತಿ ನಿರ್ಧರಿಸಿದೆ.
ಈ ಸಭೆಯಲ್ಲಿ ವಿವಿಧ ಕಡೆಗಳಿಂದ ಅಯ್ಯಪ್ಪ ಭಕ್ತರು, ಹಲವು ಸಂಘಟನೆಗಳ ಮುಖಂಡರು ಮತ್ತು ಹಿಂದೂ ಬಾಂಧವರು ಭಾಗವಹಿಸಲಿರುವರು ಎಂದು ಶರಣ್ ಪಂಪ್ವೆಲ್ ತಿಳಿಸಿದರು.
Click this button or press Ctrl+G to toggle between Kannada and English