ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿ..!

3:11 PM, Tuesday, October 9th, 2018
Share
1 Star2 Stars3 Stars4 Stars5 Stars
(No Ratings Yet)
Loading...

policeಬೆಂಗಳೂರು: ರಾತ್ರಿ ವೇಳೆಯಲ್ಲಿ ಮನೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಗಳೂರಿನ ಹೆಚ್.ಎ.ಎಲ್ ಪೋಲಿಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಇರ್ಫಾನ್ ಪಾಶಾ(25) ಎಂದು ತಿಳಿದು ಬಂದಿದೆ. ಈತ 2015 ರಲ್ಲಿ ಮನೆ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ‌ಜೈಲು ವಾಸ ಅನುಭವಿಸಿ ಜಾಮೀನಿನ ಮೇಲೆ ಹೊರಬಂದಿದ್ದ. ಈತ ಪೊಲೀಸರ ಕೈಗೂ ಸಿಗದೆ ರಾತ್ರಿ ವೇಳೆಯಲ್ಲಿ ಮನೆಯ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ. ಹೆಚ್ಎಎಲ್ ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ 4,25,000 ಬೆಲೆ ಬಾಳುವ 9 ದ್ವಿಚಕ್ರ ವಾಹನ, 2 ಮೊಬೈಲ್ ಫೋನ್ಅನ್ನು ವಶಕ್ಕೆ ಪಡೆದು ಆರೋಪಿಯನ್ನು ಜೈಲಿಗೆ ಅಟ್ಟಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English