ಮಂಡ್ಯದಲ್ಲಿ ಬೇರೆ ಪಕ್ಷದವರೂ ನಮ್ಮ ಪಕ್ಷದ ಟಿಕೆಟ್​ಗೆ​​​​​​​ ಬೇಡಿಕೆ ಇಟ್ಟಿದ್ದಾರೆ: ಅಶೋಕ್

5:14 PM, Tuesday, October 9th, 2018
Share
1 Star2 Stars3 Stars4 Stars5 Stars
(No Ratings Yet)
Loading...

r-ashokಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು ಮೂವರು ಆಕಾಂಕ್ಷಿಗಳಿದ್ದು, ಬೇರೆ ಪಕ್ಷದ ಮುಖಂಡರೊಬ್ಬರು ಟಿಕೆಟ್ ಕೇಳಿದ್ದಾರೆ. ಯಾರಿಗೆ ಟಿಕೆಟ್ ಎಂದು ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿಕೆ ನೀಡಿದ್ದು, ಮಾಜಿ ಸಚಿವ ಚಲುವರಾಯಸ್ವಾಮಿ ಕಾಂಗ್ರೆಸ್ ತೊರೆದು ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆಯ ಸುಳಿವು ನೀಡಿದ್ದಾರೆ.

ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಗೆ ಅಭ್ಯರ್ಥಿಗಳ ಕೊರತೆ ಇಲ್ಲ. ಮಂಡ್ಯದಲ್ಲಿ ಸ್ಪರ್ಧಿಸಲು ಮೂವರು ಆಕಾಂಕ್ಷಿಗಳಿದ್ದಾರೆ. ರಾಮನಗರದಿಂದ ಸ್ಪರ್ಧಿಸಲು ಇಬ್ಬರು ಆಕಾಂಕ್ಷಿಗಳಿದ್ದಾರೆ. ಯಾರಿಗೆ ಅಂತಿಮವಾಗಿ ಟಿಕೆಟ್ ನೀಡಬೇಕು ಎನ್ನುವುದನ್ನು ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ ಎಂದರು.

ಮಂಡ್ಯದಲ್ಲಿ ಸ್ಪರ್ಧಿಸಲು ಬೇರೆ ಪಕ್ಷದ ಮುಖಂಡರೊಬ್ಬರು ಸಂಪರ್ಕದಲ್ಲಿದ್ದಾರೆ. ಅವರಿಗೆ ಟಿಕೆಟ್ ನೀಡಬೇಕೋ ಅಥವಾ ನಮ್ಮಲ್ಲಿನ ಆಕಾಂಕ್ಷಿಗಳಲ್ಲಿ ಒಬ್ಬ ಅಭ್ಯರ್ಥಿಗೆ ಟಿಕೆಟ್ ನೀಡಬೇಕೋ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಒಟ್ಟಿನಲ್ಲಿ ಇಂದು ಕೋರ್ ಕಮಿಟಿ ಸಭೆಯಲ್ಲಿ ರಾಮನಗರ, ಜಮಖಂಡಿ, ಮಂಡ್ಯ ಕ್ಷೇತ್ರದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದರು.

ಇದೇ ವೇಳೆ ಉಪ ಚುನಾವಣೆಗೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಜ್ಯ ಸರ್ಕಾರದಿಂದ ಹಳೆಯ ದಿನಾಂಕ ನಮೂದಿಸಿ ಬೇಕಾದಂತೆ ಅಕ್ರಮ ವರ್ಗಾವಣೆ ಮಾಡಲಾಗಿದೆ. ದಸರಾ ಕಾರ್ಯಕ್ರಮದಲ್ಲಿಯೂ ಹೆಸರು ಸೇರಿಸುತ್ತಿದೆ. ಯಾವುದೇ ಕಾರಣಕ್ಕೂ ಯಾವ ರಾಜಕಾರಣಿಗಳನ್ನೂ ದಸರಾ ವೇದಿಕೆ ಹತ್ತಿಸಲು ಅವಕಾಶ ನೀಡಬಾರದು. ಸೂಕ್ತ ರೀತಿಯಲ್ಲಿ‌ ಚುನಾವಣಾ ಆಯೋಗ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಬೇಕು ಎಂದು ಅಶೋಕ್ ಮನವಿ ಮಾಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English