ಕುದ್ರೋಳಿಯಲ್ಲಿ ಶಾರದೆ, ನವದುರ್ಗೆಯರ ಪ್ರತಿಷ್ಠೆಯೊಂದಿಗೆ ಮಂಗಳೂರು ದಸರಾಕ್ಕೆ ಚಾಲನೆ

6:10 PM, Wednesday, October 10th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Kudroli Dasara ಮಂಗಳೂರು:  ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾ ಮಹೋತ್ಸವಕ್ಕೆ ಬುಧವಾರ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಭಟ್ ಅವರು ದೀಪ ಬೆಳಗಿಸಿ ಉತ್ಸವಕ್ಕೆ ಚಾಲನೆ ನೀಡಿದರು.

ಮಹಾಗಣಪತಿಯೊಂದಿಗೆ ನವದುರ್ಗೆಯರು ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠೆಯೊಂದಿಗೆ ದಸರಾ ಮಹೋತ್ಸವ ವಿಧ್ಯುಕ್ತವಾಗಿ  ಪ್ರಾರಂಭಗೊಂಡಿತು.

ಮಹಾಗಣಪತಿಯೊಂದಿಗೆ ನವದುರ್ಗೆಯರಾದ ಆದಿಶಕ್ತಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಿ, ಕೂಷ್ಮಾಂಡಿನಿ, ಸ್ಕಂದ ಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿಯರ ಪ್ರತಿಷ್ಠಾಪನೆ ಹಾಗೂ  ಪೂಜೆ ನಡೆಯಿತು.

Kudroli Dasara ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್‌.ಎಸ್‌. ಸಾಯಿರಾಂ, ಉಪಾಧ್ಯಕ್ಷ ರಾಘವೇಂದ್ರ ಕೂಳೂರು, ಕೋಶಾಧಿಕಾರಿ ಪದ್ಮರಾಜ್ ಆರ್  ಮತ್ತಿತರರು ಉಪಸ್ಥಿತರಿದ್ದರು.

ಈ ಬಾರಿ 75 ಟ್ಯಾಬ್ಲೋ ಗಳು ಪಾಲ್ಗೊಳ್ಳಲಿದೆ.  ರಸ್ತೆಗಳಲ್ಲಿ ಬಣ್ಣ ಬಣ್ಣದ ವಿದ್ಯುತ್ ದೀಪಗಳ ಅಲಂಕಾರವಾಗಿದ್ದು, ನಗರದ ಪ್ರಮುಖ ಕಟ್ಟಡಗಳಿಗೆ ವಿದ್ಯುತ್ ಅಲಂಕಾರ ಮಾಡಲಾಗಿದೆ.

ಮಂಗಳೂರು ದಸರಾ ಮಹೋತ್ಸವವನ್ನು ಅಕ್ಟೋಬರ್ 14 ರಂದು ಸಂಜೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ.

ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪ್ರತಿನಿತ್ಯ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮ , ಅನ್ನದಾನ ನಡೆಯಲಿದೆ.

Kudroli Dasara

Kudroli Dasara

Kudroli Dasara

Kudroli Dasara

Kudroli Dasara

Kudroli Dasara

Kudroli Dasara

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English